October 22, 2026
Thursday, October 22, 2026
spot_img

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ : ಮತ್ತಿಬ್ಬರು ಅರೆಸ್ಟ್‌, ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ.

ಹರಿಯಾಣದ ಸೋನಿಪತ್‌ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಇವರ ಮೇಲಿದೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಗುಂಡಿನ ದಾಳಿಯಲ್ಲಿ ಬಳಕೆ ಮಾಡಿರುವ ಶಸ್ತ್ರಾಸ್ತ್ರಗಳ ಪೂರೈಕೆಯಲ್ಲಿ ಜತಿನ್‌ ಹಾಗೂ ಸಮೀರ್‌ ಕೈವಾಡ ಇರುವ ಶಂಕೆ ಇದೆ. ಆರೋಪಿಗಳನ್ನು ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮುಂಬೈಗೆ ಕರೆತರಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read