ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ನಡೆಯಲಿರುವ ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಎಸ್ಪಿ ಶುಭನ್ವಿತಾ ಅವರು ಜಂಟಿಯಾಗಿ ಸಿಎಂ ಅವರಿಗೆ ಮಂತ್ರಾಕ್ಷತೆ ನೀಡಿ ಈ ಮಹೋತ್ಸವಕ್ಕೆ ಆತ್ಮೀಯವಾಗಿ ಆಮಂತ್ರಿಸಿದರು.
ಹಾಸನಾಂಬೆಯ ದರುಶನದ ಸಮಯ
ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸಾರ್ವಜನಿಕರು ಹಾಗೂ ವಿವಿಐಪಿಗಳಿಗೆ ಪ್ರತ್ಯೇಕ ಸಮಯ ನಿಗದಿಪಡಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ತಿಳಿಸಿದ್ದಾರೆ.
ಪ್ರತಿದಿನ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಮಾತ್ರ ವಿವಿಐಪಿಗಳಿಗೆ ದರ್ಶನದ ಅವಕಾಶವಿರಲಿದೆ. ವಿವಿಐಪಿ ಸಮಯವನ್ನು ಹೊರತುಪಡಿಸಿ, ಇಡೀ ದಿನದ ಉಳಿದ ಎಲ್ಲಾ ಸಮಯದಲ್ಲೂ ಸಾಮಾನ್ಯ ಜನರಿಗೆ ದರ್ಶನ ಪಡೆಯಲು ಮುಕ್ತ ಅವಕಾಶವಿರುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ 1,000 ರೂ.ಗೆ ವಿಶೇಷ ದರ್ಶನ ಪಾಸ್ ವ್ಯವಸ್ಥೆ ಮಾಡಲಾಗಿದೆ. ಒಟ್ಟು 3,500 ವಿವಿಐಪಿ ಜನರಿಗೆ ದರ್ಶನ ಪಡೆಯಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನೂ ಓದಿ:
ಕಳೆದ ವರ್ಷ ಸುಮಾರು 25 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದು, ಈ ಬಾರಿಯೂ ಮೈಸೂರು ದಸರಾದಂತೆಯೇ ಅತ್ಯಂತ ವಿಜೃಂಭಣೆಯಿಂದ ಹಾಸನಾಂಬೆ ಜಾತ್ರೆಯನ್ನು ನಡೆಸಲು ಸಿದ್ಧತೆಗಳು ನಡೆಯುತ್ತಿವೆ. ಭಕ್ತರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು ಪೊಲೀಸ್ ಹಾಗೂ ಕಂದಾಯ ಇಲಾಖೆ ವಿಶೇಷ ನಿಗಾ ವಹಿಸಿದೆ ಎಂದು ತಿಳಿಸಿದರು.



