October 24, 2026
Saturday, October 24, 2026
spot_img

India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಪಾರ್ಕ್ ಸೌತ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 19.5 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ತಿಲಕ್ ವರ್ಮಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರ ಜವಾಬ್ದಾರಿಯುತ ಆಟ ಭಾರತದ ಗೆಲುವಿನಲ್ಲಿ ನಿರ್ಣಾಯಕವಾಯಿತು.

ತಿಲಕ್ ವರ್ಮಾ–ನಿತೀಶ್ ರೆಡ್ಡಿ ಜುಗಲ್‌ಬಂದಿ

ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಟಗಾರರಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ದೊಡ್ಡ ಮೊತ್ತದ ಆರಂಭ ನೀಡಲು ಸಾಧ್ಯವಾಗಲಿಲ್ಲ. ಸಂಜು 14 ರನ್ ಗಳಿಸಿದರೆ, ಅಭಿಷೇಕ್ 27 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ವೈಭವ್ ಸೂರ್ಯವಂಶಿ ನಾಲ್ಕು ರನ್‌ಗಳಿಗೆ ನಿರ್ಗಮಿಸಿದರೆ, ನಾಯಕ ಶ್ರೇಯಸ್ ಅಯ್ಯರ್ ಏಳು ರನ್ ಗಳಿಸಿದರು. ಅಕ್ಷರ್ ಪಟೇಲ್ 11 ರನ್ ಗಳಿಸಿದರೆ, ನಮನ್ ಧೀರ್ 17 ಎಸೆತಗಳಲ್ಲಿ 31 ರನ್ ಸಿಡಿಸಿ ತಂಡಕ್ಕೆ ವೇಗ ನೀಡಿದರು.

ಇದನ್ನೂ ಓದಿ:

ಒಂದು ಹಂತದಲ್ಲಿ ಒತ್ತಡ ಎದುರಿಸಿದ ಭಾರತಕ್ಕೆ ತಿಲಕ್ ವರ್ಮಾ ಆಸರೆಯಾದರು. ಕೇವಲ 26 ಎಸೆತಗಳಲ್ಲಿ ಅಜೇಯ 51 ರನ್ ಬಾರಿಸಿದ ಅವರು ಆರು ಬೌಂಡರಿ ಹಾಗೂ ಒಂದು ಸಿಕ್ಸರ್‌ನೊಂದಿಗೆ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಮತ್ತೊಂದೆಡೆ, ನಿತೀಶ್ ಕುಮಾರ್ ರೆಡ್ಡಿ 13 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿ ತಿಲಕ್ ಗೆ ಉತ್ತಮ ಸಾಥ್ ನೀಡಿದರು. ನ್ಯೂಜಿಲೆಂಡ್ ಪರ ನಾಯಕ ಮಿಚೆಲ್ ಸ್ಯಾಂಟ್ನರ್ ನಾಲ್ಕು ವಿಕೆಟ್ ಪಡೆದರೂ ತಂಡದ ಗೆಲುವು ತಡೆಯಲು ಸಾಧ್ಯವಾಗಲಿಲ್ಲ.

ಕಿವೀಸ್‌ಗೆ ಫಿಲಿಪ್ಸ್–ಜೇಕಬ್ಸ್ ಬಲ

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತ್ತು. ಗ್ಲೆನ್ ಫಿಲಿಪ್ಸ್ 43 ಎಸೆತಗಳಲ್ಲಿ 70 ರನ್ ಸಿಡಿಸಿದರೆ, ಬೆವನ್ ಜೇಕಬ್ಸ್ 46 ಎಸೆತಗಳಲ್ಲಿ 58 ರನ್ ಗಳಿಸಿದರು. ಭಾರತದ ಪರ ಅರ್ಷದೀಪ್ ಸಿಂಗ್ ಎರಡು ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್, ಪ್ರಿನ್ಸ್ ಯಾದವ್ ಮತ್ತು ನಿತೀಶ್ ರೆಡ್ಡಿ ತಲಾ ಒಂದು ವಿಕೆಟ್ ಕಬಳಿಸಿದರು.

Must Read

Skip to toolbar