ಹೊಸದಿಗಂತ ವರದಿ ಸುಳ್ಯ:
ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.

ಭಾನುವಾರ ಬೆಳ್ಳಂಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಲ್ಲಿ ಉದ್ಯೋಗದಲ್ಲಿರುವ ವಿಟ್ಲ ಮೂಲದ ನಾರಾಯಣ ಎಂಬುವವರು ಮೈಸೂರಿಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಮಧ್ಯೆ ಈ ಅಪಘಾತ ಉಂಟಾಗಿದೆ.
ಘಟನೆಯಲ್ಲಿ 10 ವರ್ಷದ ಓರ್ವ ಬಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.



