ಹೊಸದಿಗಂತ ವರದಿ ಬೆಳಗಾವಿ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಬೆಳಗಾವಿಯ ವೈದ್ಯ ರವಿ ಇಚಲಕರಂಜಿ ಅವರ ನಿವಾಸದಲ್ಲಿ ಶ್ರೀಶೈಲಂ ಮಹಾಪೀಠದ ಶ್ರೀ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಸ್.ಎಸ್. ಮಲ್ಲಿಕಾರ್ಜುನ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕರಾದ ಆಸೀಫ್ ಸೇಠ್, ಸಿ.ಎಸ್. ನಾಡಗೌಡ, ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



