ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದ ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಉಡುಪಿಯ ಕೋಟ ಜಂಕ್ಷನ್ನಲ್ಲಿ ಇಂದು ನಡೆದಿದೆ.
ಮೃತರನ್ನು ಉಡುಪಿ ಜಿಲ್ಲೆಯ ಕೋಟ ಮಣೂರು ನಿವಾಸಿ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ತಮ್ಮ ಸೈಕಲ್ನಲ್ಲಿ ಅವರು ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿಯಿಂದ ಕುಂದಾಪುರದ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಅವರ ಸೈಕಲ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಪ್ರದೀಪ್ ಕಂಚನ್ಗೂ ಗಂಭೀರ ಗಾಯಗಳಾಗಿದೆ. ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



