October 27, 2026
Tuesday, October 27, 2026
spot_img

ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾಗಿ ಸ್ವತಃ ಮಾಹಿತಿ ಹಂಚಿಕೊಂಡ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಏಕಾಏಕಿ ಹೃದಯಬಡಿತ ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಸ್ವತಃ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪರಮೇಶ್ವರ್, ಕಾರ್ಯಕ್ರಮದ ಸಂದರ್ಭದಲ್ಲಿ ಹೃದಯಬಡಿತ ಹೆಚ್ಚಾದ ತಕ್ಷಣ ವೈದೇಹಿ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಅಗತ್ಯ ಚಿಕಿತ್ಸೆ ಪಡೆದಿರುವುದಾಗಿ ಹೇಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿ ವಿಚಾರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡದಂತೆ ಮನವಿ

ತಮ್ಮ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ತಮ್ಮನ್ನು ಭೇಟಿ ಮಾಡಲು ಯಾರೂ ಆಸ್ಪತ್ರೆಗೆ ಬರಬಾರದು ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ.

Must Read

Skip to toolbar