October 28, 2026
Wednesday, October 28, 2026
spot_img

ಕಿಂಗ್ ಕೊಹ್ಲಿ ದಾಖಲೆ ಉಡೀಸ್: ಟಿ20 ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್ ಜಗತ್ತಿನಲ್ಲಿ ಯುವ ಆಟಗಾರ ಅಭಿಷೇಕ್ ಶರ್ಮಾ ತಮ್ಮ ಬ್ಯಾಟಿಂಗ್ ಆರ್ಭಟದಿಂದ ಹೊಸ ಇತಿಹಾಸ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಸಿಡಿಸುವ ಮೂಲಕ ಇದುವರೆಗೆ ದಾಖಲೆಗಳ ಸರದಾರನಾಗಿದ್ದ ವಿರಾಟ್ ಕೊಹ್ಲಿಯ ಹೆಗ್ಗಳಿಕೆಯನ್ನು ಮುರಿಯುವಲ್ಲಿ ಅಭಿಷೇಕ್ ಯಶಸ್ವಿಯಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅವರು ಬಾರಿಸಿದ ಅಮೋಘ ಶತಕ ಕ್ರಿಕೆಟ್ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ತಮ್ಮ ಒಟ್ಟು 413 ಇನಿಂಗ್ಸ್ ಆಡಿ 10 ಶತಕಗಳನ್ನು ಸಿಡಿಸಿದ್ದರು. ಆದರೆ, ಯುವ ದಾಂಡಿಗ ಅಭಿಷೇಕ್ ಶರ್ಮಾ ಕೇವಲ 215 ಇನಿಂಗ್ಸ್ ಆಡುವಷ್ಟರಲ್ಲೇ ಬರೋಬ್ಬರಿ 11 ಶತಕಗಳನ್ನು ಬಾರಿಸುವ ಮೂಲಕ ಕೊಹ್ಲಿಯ ಈ ದಾಖಲೆಯನ್ನು ಹಿಂದಿಕ್ಕಿ ಮುನ್ನಡೆದಿದ್ದಾರೆ.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ಶತಕ ಸಿಡಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ದೈತ್ಯ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಇನಿಂಗ್ಸ್ ಆಡಿ ಒಟ್ಟು 22 ಶತಕಗಳನ್ನು ಸಿಡಿಸಿದ್ದಾರೆ.

ಆದರೆ, ಕೇವಲ 215 ಇನಿಂಗ್ಸ್‌ನಲ್ಲಿಯೇ 11 ಶತಕಗಳನ್ನು ಸಿಡಿಸಿರುವ ಅಭಿಷೇಕ್ ಶರ್ಮಾ ಅವರ ಪ್ರಸ್ತುತ ಫಾರ್ಮ್ ನೋಡಿದರೆ, ಮುಂದೊಂದು ದಿನ ಕ್ರಿಸ್ ಗೇಲ್ ಅವರ ಈ ವಿಶ್ವ ದಾಖಲೆಯೂ ಉಡೀಸ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಂಬರುವ ದಿನಗಳಲ್ಲಿ ಅಭಿಷೇಕ್ ಭಾರತೀಯ ಕ್ರಿಕೆಟ್‌ನ ಮತ್ತೊಬ್ಬ ದೊಡ್ಡ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮುವುದರಲ್ಲಿ ಎರಡು ಮಾತಿಲ್ಲ.

Must Read

Skip to toolbar