October 28, 2026
Wednesday, October 28, 2026
spot_img

ನವೆಂಬರ್‌ನಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಸಿನಿಮಾ ಪ್ರದರ್ಶನ ಮಾಡೋ ಹಾಗಿಲ್ಲ : ಕರವೇ ವಾರ್ನಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನವೆಂಬರ್‌ ತಿಂಗಳಿನಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಈ ತಿಂಗಳಿನಲ್ಲಿ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾ ಬಿಟ್ಟು ಇನ್ಯಾವುದೇ ಭಾಷೆಯ ಸಿನಿಮಾಗಳ ಪ್ರದರ್ಶನ ಮಾಡುವಂತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶವೊಂದನ್ನು ಹೊರಡಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಎಂದು ಕರವೇ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿ, ನಮ್ಮ ರಾಜ್ಯದ ಭಾಷೆ ಕನ್ನಡ. ನಮ್ಮ ತಾಯಿಭಾಷೆಗಾಗಿ ಒಂದು ತಿಂಗಳು ಮುಡಿಪಿಡೋಣ, ರಾಜ್ಯದ ಚಿತ್ರಮಂದಿರಗಳಲ್ಲಿ ಒಂದು ತಿಂಗಳು ಬರೀ ಕನ್ನಡ ಸಿನಿಮಾಗಳಿಗೆ ಮಾತ್ರ ಅವಕಾಶ ಕೊಡಬೇಕು. ಇದರಿಂದ ಕನ್ನಡ ಚಿತ್ರರಂಗಕ್ಕೂ ಒಳಿತಾಗುತ್ತದೆ ಎಂದು ಹೇಳಿದ್ದಾರೆ. ನವೆಂಬರ್‌ ಒಂದರಂದು ಕೂಡ ಅನ್ಯಭಾಷೆಯ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಇದನ್ನು ತಪ್ಪಿಸಬೇಕು. ಕನ್ನಡ ರಾಜ್ಯೋತ್ಸವಕ್ಕೆ ಅವಮಾನ ಆಗಲು ಬಿಡಬಾರದು. ಈಗಾಗಲೇ ಚಿತ್ರಮಂದಿರಕ್ಕೆ ಎಚ್ಚರಿಕೆ ನೀಡಿದ್ದೇವೆ. ಸರ್ಕಾರವೇ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದರೆ ಎಲ್ಲರೂ ಅದನ್ನು ಪಾಲಿಸಲಿದ್ದಾರೆ ಎಂದಿದ್ದಾರೆ.

https://www.facebook.com/100008858687677/videos/1135309535699838/?__so__=watchlist&__rv__=video_home_www_playlist_video_list

ಪ್ರಸ್ತುತ ಕರ್ನಾಟಕದಲ್ಲಿ ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಅದರ ಜೊತೆಗೆ ಪರಭಾಷೆ ಸಿನಿಮಾಗಳಾದ ‘ಜೈಲರ್ 2’ ಸಿನಿಮಾ ಸಹ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಇದೇ ಅಕ್ಟೋಬರ್ 30ರಂದು ತೆಲುಗಿನ ‘ಆದರ್ಶ ಕುಟುಂಬಂ 47’ ಸಿನಿಮಾ ಸಹ ರಿಲೀಸ್ ಆಗಲಿದೆ. ಇವುಗಳ ಹೊರತಾಗಿ ‘ರಣಬಾಲಿ’, ‘ಡೋರ್ತಿ’, ‘ಬತ್ತ’, ‘ಹೈಕು’ ಇನ್ನೂ ಕೆಲ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ.

Must Read