ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಣಗಿ ಹಾಕಿದ್ದ ಬಟ್ಟೆಗಳನ್ನು ತೆಗೆಯುವ ವೇಳೆ ಕಾಲು ಜಾರಿ ಕೆಳಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ನ ಸಿಪಾಯಿಗಲ್ಲಿಯಲ್ಲಿ ನಡೆದಿದೆ.
ಭುವನೇಶ್ವರಿ ಮೃತ ಮಹಿಳೆ. ಇವರು ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿ ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಸಂಜೆ ಹೊರಗೆ ಹೋಗಿ ಒಣಗಿದ್ದ ಬಟ್ಟೆಗಳನ್ನು ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಖಿನ್ನತೆ ಇರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎನ್ನುವ ಸಂಶಯವೂ ಇದ್ದು, ಮನೆಮಂದಿ ಇದನ್ನು ತಿರಸ್ಕರಿಸಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



