Sunday, September 21, 2025

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ಆರ್. ಅಶೋಕ್ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು , ಆಳಂದ ಬಹಳ ದೂರ ಇದೆ. ಬೆಂಗಳೂರು ಪಕ್ಕದ ಮಾಲೂರಿನಲ್ಲಿ ಮತಗಳ್ಳತನ ಎಂದು ಕೋರ್ಟ್ ಆದೇಶ ಮಾಡಿದೆ. ಅಲ್ಲಿನ ಜಿಲ್ಲಾಧಿಕಾರಿ, ಕೋರ್ಟ್ ಆದೇಶವಿದ್ದರೂ ಸಿಸಿ ಟಿವಿ ಮಾಹಿತಿಯನ್ನು ಕೇಳಿದ್ದರೂ ಕೊಟ್ಟಿಲ್ಲ. ಅಲ್ಲಿ ಗೆದ್ದ ಕಾಂಗ್ರೆಸ್ ಶಾಸಕರ ಸದಸ್ಯತ್ವ ವಜಾ ಆಗಿದೆ. ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೇಳಿದರು.

ಅಫಿಡವಿಟ್ ಕೊಡಿ ಎಂದು ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಕೇಳಿದ್ದರೂ ಕೊಟ್ಟಿಲ್ಲ, ಮಾಲೂರಿನಲ್ಲಿ ನಮ್ಮ ಅಭ್ಯರ್ಥಿ ಅಫಿಡವಿಟ್ ಕೊಟ್ಟು, ತನಿಖೆಗೆ ಹೈಕೋರ್ಟಿಗೆ ವಿನಂತಿಸಿದ್ದರು. ಹೈಕೋರ್ಟ್, ಡಿಸಿ ತಪ್ಪು ಮಾಡಿದ್ದಾಗಿ ತಿಳಿಸಿ ಕ್ರಮ ಕೈಗೊಳ್ಳಲು ಆದೇಶ ಮಾಡಿದೆ. ರಾಹುಲ್ ಗಾಂಧಿಯವರಿಗೆ ಇದರ ಜ್ಞಾನ ಇಲ್ಲವೇ ಎಂದು ಅಶೋಕ್ ಪ್ರಶ್ನಿಸಿದರು.

ಇದನ್ನೂ ಓದಿ