ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೇ ನವೆಂಬರ್ 15ರಂದು ಬೆಂಗಳೂರಿನ ಹೆಮ್ಮೆಯ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಈ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಅವರು ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಮಾಡಲು ಆಗಮಿಸುತ್ತಿದ್ದಾರೆ. ಈ ವೇಳೆ ಬರ ಪರಿಹಾರ ನಿಧಿ ಬಿಡುಗಡೆ ಬಗ್ಗೆಯೂ ಮಾತನಾಡಲಾಗುತ್ತದೆ ಎಂದಿದ್ದಾರೆ.
ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಣ ಬಿಡುಗಡೆ ಬಗ್ಗೆ ಪ್ರಧಾನಿ ಅವರ ಜೊತೆ ಚರ್ಚೆ ಮಾಡಲು ಸರ್ವಪಕ್ಷ ನಿಯೋಗದ ಭೇಟಿಗೆ ಸಮಯಾವಕಾಶ ಕೇಳುತ್ತೇನೆ ಎಂದಿದ್ದಾರೆ.ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ಪಿಂಕ್ ಮೆಟ್ರೋ ಸಂಚಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಿಂಕ್ ಮೆಟ್ರೋ ಮಾರ್ಗ ಕಾಳೇನ ಅಗ್ರಹಾರ ದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗವೂ ಒಟ್ಟು ಉದ್ದ ಸುಮಾರು 21.25 ಕಿ.ಮೀ ಇದ್ದು, ಒಟ್ಟು 18 ನಿಲ್ದಾಣಗಳಿದೆ.
ಸದ್ಯ 7.5 ಕಿ.ಮೀ. ಎತ್ತರಿಸಿದ ಮಾರ್ಗ ಉದ್ಘಾಟನೆಗೆ ಸಿದ್ಧವಾಗಿದ್ದು, ಈ ಎಲಿವೇಟೆಡ್ ಮೆಟ್ರೋ ಮಾರ್ಗವನ್ನು ಪ್ರಧಾನಿಗಳು ಉದ್ಘಾಟನೆ ಮಾಡಲಿದ್ದಾರೆ. ಉಳಿದ 13.76 ಕಿ.ಮೀ. ಸುರಂಗ ಮಾರ್ಗ ಕಾಮಗಾರಿಯಲಿದ್ದು, ಈ ಮಾರ್ಗ ಮುಂದಿ ವರ್ಷ ಉದ್ಘಾಟನೆ ಆಗುವ ಸಾಧ್ಯತೆ ಇದೆ. ಡೈರಿ ಸರ್ಕಲ್ನಿಂದ ನಾಗವಾರ, ಶಿವಾಜಿನಗರ ಹಾಗೂ ಕಂಟೋನ್ಮೆಂಟ್ ಮೂಲಕ ನಾಗವಾರ ವರೆಗೂ ಸಂಪರ್ಕ ಕಲ್ಪಿಸಲಿದೆ.



