ಹೊಸದಿಗಂತ ವರದಿ ಹುಬ್ಬಳ್ಳಿ:
ರಾಜ್ಯದ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸಾಸಿರುವ ಗೆಲುವು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳಿಗೆ ಮತದಾರರು ನೀಡಿರುವ ಪ್ರಜಾಸತ್ತಾತ್ಮಕ ತಿರುಗೇಟಾಗಿದೆ ಎಂದು ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎಂ.ಕೆ. ಸುರೇಶ ಅವರ ಗೆಲುವು ಬಿಜೆಪಿ ಮೇಲಿನ ವಿಶ್ವಾಸವನ್ನು ಪ್ರತಿಬಿಂಬಿಸಿದೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಗೆಲುವಿನ ನಿರೀಕ್ಷೆ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಕಾಂಗ್ರೆಸ್ ಸರ್ಕಾರದ ಜನವಿರೋ ಆಡಳಿತಕ್ಕೆ ರಾಜ್ಯದ ಪ್ರಬುದ್ಧ ಮತದಾರರು ನೀಡುತ್ತಿರುವ ಉತ್ತರವನ್ನು ಈ ಫಲಿತಾಂಶಗಳು ಸ್ಪಷ್ಟಪಡಿಸುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.
ಉಚಿತ ಯೋಜನೆಗಳ ಆಮಿಷ ತೋರಿಸಿ ಜನರ ವಿಶ್ವಾಸವನ್ನು ಶಾಶ್ವತವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಸರ್ಕಾರ ಅರಿತುಕೊಳ್ಳಬೇಕು. ಆಡಳಿತದಲ್ಲಿ ಅಭಿವೃದ್ಧಿ, ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದ್ಧತೆ ಇರಬೇಕು. ಕೇವಲ ಪ್ರಚಾರ ಮತ್ತು ಭರವಸೆಗಳಿಂದ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ದೊರೆತಿರುವ ಬೆಂಬಲವು ಪಕ್ಷದ ಸಂಘಟನಾತ್ಮಕ ಶಕ್ತಿ, ಕಾರ್ಯಕರ್ತರ ನಿರಂತರ ಶ್ರಮ ಮತ್ತು ಜನಪರ ಹೋರಾಟಗಳಿಗೆ ಸಂದ ಮನ್ನಣೆಯಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಪ್ರಬುದ್ಧ ಮತದಾರರು ವ್ಯಕ್ತಪಡಿಸಿರುವ ಅಸಮಾಧಾನವನ್ನು ಈ ಫಲಿತಾಂಶಗಳು ನಿರ್ಲಕ್ಷಿಸಲು ಸಾಧ್ಯವಿಲ್ಲ. ಜನರ ತೀರ್ಪನ್ನು ಒಪ್ಪಿಕೊಂಡು ಆಡಳಿತ ಸುಧಾರಿಸಿಕೊಳ್ಳುವ ಬದಲು, ಫಲಿತಾಂಶಗಳ ಬಗ್ಗೆ ನೆಪಗಳನ್ನು ಹುಡುಕುವುದು ಕಾಂಗ್ರೆಸ್ನ ರಾಜಕೀಯ ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಲಿಂಗರಾಜ ಪಾಟೀಲ ಹೇಳಿದ್ದಾರೆ.



