October 28, 2026
Wednesday, October 28, 2026
spot_img

ಕುಶಾಲನಗರದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ: ಓರ್ವನ ಬಂಧನ, ಮಹಿಳೆಯ ರಕ್ಷಣೆ

ಹೊಸದಿಗಂತ ವರದಿ ಮಡಿಕೇರಿ:

ಕುಶಾಲನಗರದ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವನನ್ನು ಬಂಧಿಸಲಾಗಿದ್ದು, ಮಹಿಳೆಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಕೇರಳ ರಾಜ್ಯದ ಆರೋಪಿ ನಿಜೇಶ್.ಕೆ ಎಂಬಾತನ ವಿರುದ್ಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಕುಶಾಲನಗರ ಬೈಪಾಸ್ ರಸ್ತೆಯ ರಾಯಲ್ ಲಾಡ್ಜ್’ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ದೊರೆತ ಮಾಹಿತಿ ಅನ್ವಯ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ, ಸಿಬ್ಬಂದಿಗಳನ್ನು ಅವರು ಶ್ಲಾಘಿಸಿದ್ದಾರೆ.

Must Read