ಹೊಸದಿಗಂತ ವರದಿ ಹಾವೇರಿ:
ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಹಾವೇರಿ ನಗರ ಘಟಕದ ಕಾರ್ಯಕರ್ತರು ಬುಧವಾರ ನಗರದ ಜೆ.ಪಿ. ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಶಹರ ಘಟಕದ ಅಧ್ಯಕ್ಷ ಕಿರಣ್ ಕೊಳ್ಳಿ ಮಾತನಾಡಿ, ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಪಕ್ಷದ ಸಂಘಟಿತ ಹೋರಾಟ ಹಾಗೂ ಪದವೀಧರ ಮತದಾರರ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಕಾರ್ಯಕರ್ತರು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಶ್ರಮಿಸಿದ್ದು, ಪದವೀಧರ ಮತದಾರರು ಪಕ್ಷದ ಅಭ್ಯರ್ಥಿಯ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿದ್ದಾರೆ. ಸಂಕನೂರು ಅವರ ಗೆಲುವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ ಎಂದರು.
ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಎಸ್.ವಿ. ಸಂಕನೂರ ಗೆಲುವು ಸಾಧ್ಯವಾಗಿದೆ. ಪ್ರಧಾನಿ ಮೋದಿ ನಾಯಕತ್ವದ ಮೇಲೆ ಜನರು ಇಟ್ಟಿರುವ ವಿಶ್ವಾಸ ಪಕ್ಷಕ್ಕೆ ಬಲ ನೀಡಿದೆ. ಮುಂದಿನ ದಿನಗಳಲ್ಲಿಯೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.
ಇದನ್ನೂ ಓದಿ:
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಹನುಮಂತನಾಯಕ ಬದಾಮಿ, ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ನಿರಂಜನ ಹೇರೂರ, ನಂಜುಂಡೇಶ ಕಳ್ಳೇರ, ಮೃತ್ಯುಂಜಯ ಮುಷ್ಠಿ, ವೀರಣ್ಣ ಹೇರೂರು, ಮಹಾಲಿಂಗಸ್ವಾಮಿ ಹಿರೇಮಠ, ನಾಗರಾಜ ಹರಿಗೋಲ, ಗುಡ್ಡಪ್ಪ ಭರಡಿ, ಸುರೇಶ ಹೊಸಮನಿ, ವಿಜಯಕುಮಾರ ಚಿನ್ನಿಕಟ್ಟಿ, ರಾಮು ಮಾಳಗಿ, ರುದ್ರೇಶ ಚಿನ್ನಣ್ಣನವರ, ನಿಖಿಲ್ ಡೊಗ್ಗಳ್ಳಿ, ಗಿರೀಶ ಶೆಟ್ಟರ್, ಜಗದೀಶ ಕನವಳ್ಳಿ, ವೀರಣ್ಣ ಸವಣೂರ, ಅಲ್ಲಾಭಕ್ಷ ತಿಮ್ಮಾಪುರ, ಶಿವಬಸವ ವನಹಳ್ಳಿ, ಪ್ರವೀಣ ಶೆಟ್ಟರ್, ಶಿವಯೋಗಿ ಕೊಳ್ಳಿ, ರೋಹಿಣಿ ಪಾಟೀಲ, ವಿಜಯಲಕ್ಷ್ಮೀ ಹೆಗಡೆ, ಜ್ಯೋತಿ ಸಾತೇನಹಳ್ಳಿ, ಅನುಪಮಾ ವಾಲಿ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.



