ಹೊಸದಿಗಂತ ವರದಿ ಹಲಗೂರು:
ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಚಿಕ್ಕಲಚಗೆರೆ ಗ್ರಾಮದ ಬಳಿ ನಡೆದಿದೆ.
ಮಳವಳ್ಳಿ ತಾಲ್ಲೂಕಿನ ತಗಡಯ್ಯನ ದೊಡ್ಡಿ ಗ್ರಾಮದ ಬಸವರಾಜು ಅವರ ಪುತ್ರ ಬಿ.ಚೇತನ್ (26) ಮೃತಪಟ್ಟ ಯುವಕ.
ಚೇತನ್ ಖಾಸಗಿ ಕಾರ್ಯನಿಮಿತ್ತ ಹಲಗೂರಿಗೆ ಬಂದು ಮಂಗಳವಾರ ರಾತ್ರಿ ಬೈಕ್ನಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಲಚಗೆರೆ ಗ್ರಾಮದ ಬಳಿ ಮುತ್ತತ್ತಿ ಕಡೆಯಿಂದ ಬಂದ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಚೇತನ್ ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಮಳವಳ್ಳಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಾಯಾಳು ಬಿ.ಚೇತನ್ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ.
ಇದನ್ನೂ ಓದಿ;
ಘಟನಾ ಸ್ಥಳಕ್ಕೆ ಮಳವಳ್ಳಿ ವಿಭಾಗದ ಡಿವೈಎಸ್ಪಿ ಯಶವಂತ್ ಕುಮಾರ್, ಹಲಗೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



