October 29, 2026
Thursday, October 29, 2026
spot_img

ಬೆಂಗಳೂರು ಅಭಿವೃದ್ಧಿಯತ್ತ ಮತ್ತೊಂದು ದಿಟ್ಟ ಹೆಜ್ಜೆ: 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆ ಘೋಷಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಡಿ.ಕೆ. ಶಿವಕುಮಾರ್‌ ಬೆಂಗಳೂರು ಅಭಿವೃದ್ಧಿಯತ್ತ ದಿಟ್ಟೆ ಹೆಜ್ಜೆ ಹಾಕಿದ್ದು, ನವ ಬೆಂಗಳೂರು ನಿರ್ಮಾಣಕ್ಕಾಗಿ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಸಮಸ್ಯೆಗಳೂ ಹೆಚ್ಚಿವೆ. ಜನರನ್ನು ಊರು ಬಿಟ್ಟು ಹೋಗಿ ಎನ್ನಲು ಆಗುವುದಿಲ್ಲ. ಆದರೆ ಅವರು ಇಲ್ಲಿರಲು ಬೇಕಾಗುವ ಸಕಲ ವ್ಯವಸ್ಥೆಯಲ್ಲಿ ಸರ್ಕಾರ ಮಾಡುತ್ತಿದೆ. ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ಮೂಲಸೌಕರ್ಯ ಯೋಜನೆಗಳನ್ನು ಸಿಎಂ ಜಾರಿ ಮಾಡಲಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರೊಂದಿಗೆ ಸಿಎಂ ಸಭೆ ನಡೆಸಿದ್ದು, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಭಾರತದ ಇತರ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದ್ದು, ರಸ್ತೆಗಳ ಸಾಮರ್ಥ್ಯವು ಅದಕ್ಕೆ ತಕ್ಕಂತಿಲ್ಲ. ಹೀಗಾಗಿ ರಸ್ತೆ ನಿರ್ಮಾಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ರಸ್ತೆ, ಸುರಂಗ ಮಾರ್ಗ, ಎಲಿವೇಟೆಡ್‌ ಕಾರಿಡಾರ್, ಮೆಟ್ರೋ, ಬಸ್ ಹಾಗೂ ಉಪನಗರ ರೈಲು ಸೇರಿದಂತೆ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ, ಮುಂದಿನ 10 ವರ್ಷಗಳ ದೂರದೃಷ್ಟಿಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾರತಮ್ಯವಿಲ್ಲದೆ ಎಲ್ಲಾ ಕ್ಷೇತ್ರಗಳಿಗೆ ಅಗತ್ಯ ಅನುದಾನ ಒದಗಿಸಿ, ಸುಗಮ ಸಂಚಾರ, ಶಾಶ್ವತ ಕುಡಿಯುವ ನೀರು, ಒಳಚರಂಡಿ ಹಾಗೂ ವೈಜ್ಞಾನಿಕ ಕಸ ನಿರ್ವಹಣೆಯ ಮೂಲಕ ಬೆಂಗಳೂರು ನಗರವನ್ನು ಇನ್ನಷ್ಟು ಆಧುನಿಕ, ಸುಸಜ್ಜಿತ ಹಾಗೂ ವಾಸಯೋಗ್ಯ ನಗರವನ್ನಾಗಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

Must Read