ಹೊಸದಿಗಂತ ವರದಿ ಯಾದಗಿರಿ:
ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಕರಿಬೆಟ್ಟ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ.
ಮೃತರನ್ನು ಸೈದಾಪುರ ಗ್ರಾಮದ ತಿಮ್ಮಣ್ಣ (30), ಅವರ ಪತ್ನಿ ನಾಗಮ್ಮ (30) ಹಾಗೂ ತಾಯಿ ಬಸಲಿಂಗಮ್ಮ (60) ಎಂದು ಗುರುತಿಸಲಾಗಿದೆ.
ಪಲ್ಸರ್ ಬೈಕ್ನಲ್ಲಿ ಕಣೇಕಲ್ ಗ್ರಾಮದಿಂದ ಸೈದಾಪುರಕ್ಕೆ ತೆರಳುತ್ತಿದ್ದ ವೇಳೆ ಕರಿಬೆಟ್ಟ ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಯಾದಗಿರಿ ಕಡೆಯಿಂದ ರಾಯಚೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಟೊಯೋಟಾ ಫಾರ್ಚುನರ್ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:
ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರೂ ಮೃತಪಟ್ಟಿದ್ದಾರೆ.
ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.



