ಹೊಸದಿಗಂತ ವರದಿ ಕಲಬುರಗಿ:
ಸಿದ್ದರಾಮಯ್ಯ ಅವರ ಸ್ಟಿಂಗ್ ಪ್ರಕರಣ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿ ಮೊಬೈಲ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ತಾಂತ್ರಿಕವಾಗಿ ತನಿಖೆ ನಡೆಸಿದಾಗ ಕೆಲ ಅಂಶಗಳು ಬೆಳಕಿಗೆ ಬಂದಿವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆಗಿರಲಿ ತಮ್ಮ ಸ್ಥಾನಮಾನ ಹಾಗೂ ಘನತೆಯನ್ನು ಕಾಪಾಡಿಕೊಳ್ಳಬೇಕು. ಅದನ್ನು ಬಿಟ್ಟು ವೈಯಕ್ತಿಕ ಟೀಕೆಗಳಲ್ಲಿ ತೊಡಗುವುದು ಸರಿಯಲ್ಲ ಎಂದರು.
ಇದನ್ನೂ ಓದಿ:
ಕುಮಾರಸ್ವಾಮಿ ಅವರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ, ಡಿಜಿ ಕಚೇರಿಗೆ ಭೇಟಿ ನೀಡಿದ್ದೇಕೆ ಎಂಬುದಕ್ಕೂ ತನಿಖೆಯಲ್ಲಿ ಉತ್ತರ ಸಿಗಲಿದೆ. ತನಿಖೆ ವೇಳೆ ಅವರ ಆಪ್ತರ ಹೆಸರುಗಳು ಪ್ರಸ್ತಾಪವಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಆದರೆ, ನೋಟಿಸ್ಗೆ ಉತ್ತರ ನೀಡುವ ಬದಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎಂದು ಹೇಳಿದರು.
ಸ್ಟಿಂಗ್ ಮಾಡಿದ್ದು ಯಾರು, ಏಕೆ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಅದರ ಪ್ರಚಾರ ಮಾಡಿದವರು ಯಾರು ಎಂಬುದನ್ನು ಪತ್ತೆಹಚ್ಚಬೇಕಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ. ಈ ನಡುವೆ ಕುಮಾರಸ್ವಾಮಿ ಅವರ ಆಪ್ತರು ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.



