November 1, 2026
Sunday, November 1, 2026
spot_img

ಕನ್ನಡದ ಹೆಸರಿನಲ್ಲಿ ಕಾನೂನು ಕೈಗೆ ಬೇಡ; ಐಟಿ ಕಂಪನಿಗಳ ಮೇಲೆ ದಾಳಿ ಮಾಡಿದರೆ ಕ್ರಮ: ಸಿಎಂ ಡಿಕೆಶಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕನ್ನಡ ಮತ್ತು ಕರ್ನಾಟಕದ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದರೂ, ಕನ್ನಡಪರ ಹೋರಾಟದ ಹೆಸರಿನಲ್ಲಿ ಕಾನೂನು ಕೈಗೆ ತೆಗೆದುಕೊಳ್ಳುವುದು ಹಾಗೂ ಐಟಿ ಕಂಪನಿಗಳ ಮೇಲೆ ದಾಳಿ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಹೋರಾಟಗಾರರು ನೈತಿಕ ಪೊಲೀಸ್ ಗಿರಿ ಮಾಡದೆ, ಸಮಸ್ಯೆಗಳಿದ್ದರೆ ಸರ್ಕಾರದ ಗಮನಕ್ಕೆ ತರಬೇಕು ಎಂದು ಅವರು ಕಿವಿಮಾತು ಹೇಳಿದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆಶಿ, ನಮ್ಮ ಭೂಮಿಯಲ್ಲಿ ಇರುವವರು ಈ ನೆಲಕ್ಕೆ ಗೌರವ ಕೊಡಬೇಕು. ಕಾನೂನು ಎಲ್ಲರಿಗೂ ಒಂದೇ. ಕನ್ನಡಿಗರು ಕೂಡ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದರು.

ಇದನ್ನೂ ಓದಿ:

ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನಿಸಿದ್ದು, ಕಡತ ಸಿದ್ಧವಾಗುತ್ತಿದೆ ಎಂದು ತಿಳಿಸಿದ ಅವರು, ಮತ್ತೆ ಗಲಾಟೆ ನಡೆದರೆ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಅಡ್ಡಿಯಾಗಬಹುದು ಎಂದು ಎಚ್ಚರಿಸಿದರು.

ಕನ್ನಡದ ಹಕ್ಕುಗಳಿಗಾಗಿ ಹೋರಾಟಕ್ಕೆ ಸರ್ಕಾರದ ಬೆಂಬಲವಿದೆ. ಆದರೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ಸಿಎಂ ಡಿಕೆಶಿ ಹೇಳಿದರು.

Must Read