ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಖಾಸಗಿ ಸುದ್ದಿ ವಾಹಿನಿಯಾದ ಪವರ್ ಟಿವಿ ಕಚೇರಿ ಹಾಗೂ ಮಾಲೀಕ ರಾಕೇಶ್ ಶೆಟ್ಟಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಸುಮಾರು 30 ಅಧಿಕಾರಿಗಳಿದ್ದ ಸಿಸಿಬಿ ತಂಡವು ಇಂದು ಏಕಕಾಲದಲ್ಲಿ ರಾಕೇಶ್ ಶೆಟ್ಟಿ ಕೊಡಿಗೆಹಳ್ಳಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧದ ವಿಡಿಯೋವನ್ನು ತಾನೇ ಚಿತ್ರೀಕರಿಸಿದ್ದು ಎಂದು ರಾಕೇಶ್ ಶೆಟ್ಟಿ ಒಪ್ಪಿಕೊಂಡಿದ್ದರು ಎನ್ನಲಾಗಿದೆ.
ಇದರ ಜೊತೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ರಾಕೇಶ್ ಶೆಟ್ಟಿ ಆಫೀಸ್ ಹಾಗೂ ಮನೆ ಮೇಲೆ ದಾಳಿ ನಡೆಸಿದರೆ ಹಲವು ವಿಡಿಯೋಗಳು ಪತ್ತೆಯಾಗುತ್ತವೆ ಎಂದು ಹೇಳಿದ್ದರು. ಪ್ರಕರಣದ ತನಿಖೆಯ ಬೆಳವಣಿಗೆಗಳ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಪವರ್ ಟಿವಿ ಕಚೇರಿ ಮತ್ತು ರಾಕೇಶ್ ಶೆಟ್ಟಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಎರಡೂ ಸ್ಥಳಗಳಲ್ಲಿ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ.



