November 2, 2026
Monday, November 2, 2026
spot_img

ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ : ಎಂಟು ಕೂಲಿ ಕಾರ್ಮಿಕರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಸ್ಥಾನದ ಝುಂಜುನು ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಕೆಲಸ ಮಾಡುವ ವೇಳೆ ಕರೆಂಟ್‌ ಶಾಕ್‌ ತಗುಲಿ ಎಂದು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಉದಯಪುರವಾಟಿ ಪೊಲೀಸ್‌ ಠಾಣಾ ವ್ಯಾಪ್ತಿಯ ಛಾಪೋಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಜಲ್ಲಿಕಲ್ಲು ಮಿಶ್ರಣ ಮಾಡುವ ಯಂತ್ರವೊಂದು ಮೇಲ್ಮೈಯಲ್ಲಿ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ಲೈನ್‌ಗೆ ತಗುಲಿದೆ. ಇದರ ಪರಿಣಾಮವಾಗಿ ಯಂತ್ರಕ್ಕೆ ವಿದ್ಯುತ್ ಹರಿದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

11,000 ವೋಲ್ಟ್‌ನ ವಿದ್ಯುತ್ ಲೈನ್ ಇದಾಗಿದ್ದು, ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಕೆಲಸ ಮಾಡುವ ಜನರಿಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಗರಂ ಆಗಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕರು ಸಾವನ್ನಪ್ಪಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲು, ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಮತ್ತು ಎಲ್ಲಾ ರೀತಿಯ ನೆರವು ಒದಗಿಸಲು ಹಾಗೂ ಘಟನೆಯ ತನಿಖೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಹೇಳಿದ್ದಾರೆ.

Must Read