November 2, 2026
Monday, November 2, 2026
spot_img

ದೀಪಾವಳಿ ಸಂಭ್ರಮಕ್ಕೆ ಸುಪ್ರೀಂ ಅಸ್ತು: ದೆಹಲಿ-NCRನಲ್ಲಿ ಎರಡು ದಿನ ಹಸಿರು ಪಟಾಕಿಗೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೆಹಲಿ-NCR ವ್ಯಾಪ್ತಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಎರಡು ದಿನಗಳ ಸೀಮಿತ ಅನುಮತಿ ನೀಡಿದೆ. ನವೆಂಬರ್ 7 ಮತ್ತು 8ರಂದು ಬೆಳಗ್ಗೆ 6ರಿಂದ 7ರವರೆಗೆ ಹಾಗೂ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಬಹುದು ಎಂದು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರ ಪೀಠ ಆದೇಶಿಸಿದೆ.

ಈ ವರ್ಷ ನವೆಂಬರ್ 8ರಂದು ದೀಪಾವಳಿ ಆಚರಣೆ ನಡೆಯಲಿದೆ. ಹಬ್ಬದ ಸಂಭ್ರಮಕ್ಕೆ ಅವಕಾಶ ನೀಡುವ ಜೊತೆಗೆ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಸುರಕ್ಷತೆ ಕಾಪಾಡುವ ಉದ್ದೇಶದಿಂದ ನ್ಯಾಯಾಲಯ ಹಲವು ನಿರ್ಬಂಧಗಳನ್ನು ವಿಧಿಸಿದೆ.

ಆಸ್ಪತ್ರೆ, ವೃದ್ಧಾಶ್ರಮಗಳ ಸುತ್ತ ಪಟಾಕಿ ನಿಷೇಧ

ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳು, ವೃದ್ಧಾಶ್ರಮಗಳು ಹಾಗೂ ಅಧಿಸೂಚಿತ ಮೌನ ವಲಯಗಳ 300 ಮೀಟರ್ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸುವಂತಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನವೆಂಬರ್ 9ರಿಂದ ಈ ಹಿಂದೆ ಜಾರಿಯಲ್ಲಿದ್ದ ಪಟಾಕಿಗಳ ಸಂಪೂರ್ಣ ನಿಷೇಧ ಮತ್ತೆ ಜಾರಿಗೆ ಬರಲಿದೆ ಎಂದು ಪೀಠ ತಿಳಿಸಿದೆ. ಹೀಗಾಗಿ ಅನುಮತಿಸಲಾದ ಎರಡು ದಿನಗಳ ಹೊರತಾಗಿ ಪಟಾಕಿ ಸಿಡಿಸುವುದಕ್ಕೆ ಅವಕಾಶ ಇರುವುದಿಲ್ಲ.

ಇದನ್ನೂ ಓದಿ:

ಪ್ರಮಾಣೀಕೃತ ಹಸಿರು ಪಟಾಕಿಗಳಿಗಷ್ಟೇ ಅನುಮತಿ

CSIR-NEERI ಮತ್ತು PESO ಸಂಸ್ಥೆಗಳ ಮಾನ್ಯ ಪ್ರಮಾಣಪತ್ರ ಹೊಂದಿರುವ ತಯಾರಕರು ನವೆಂಬರ್ 2ರಿಂದ 6ರವರೆಗೆ ಅನುಮೋದಿತ ಹಸಿರು ಪಟಾಕಿಗಳನ್ನು ಮಾತ್ರ ತಯಾರಿಸಬಹುದು ಎಂದು ನ್ಯಾಯಾಲಯ ಸೂಚಿಸಿದೆ.

ಅಕ್ರಮ ಪಟಾಕಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ದೆಹಲಿ-NCRನಲ್ಲಿ ಸಾಂಪ್ರದಾಯಿಕ ಮತ್ತು ಅಕ್ರಮ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ತಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

Must Read