November 2, 2026
Monday, November 2, 2026
spot_img

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು: ಆರೋಗ್ಯ ಮಾಹಿತಿ ಹಂಚಿಕೊಂಡ ಮಗಳು ಸುಪ್ರಿಯಾ ಸುಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

85 ವರ್ಷದ ಪವಾರ್‌ ಅವರಿಗೆ ಕೆಮ್ಮು ಕಾಣಿಸಿಕೊಂಡ ಬಳಿಕ ಉಸಿರಾಟದ ವೇಳೆ ಎದೆನೋವಿನ ಸಮಸ್ಯೆ ಎದುರಾಗಿದ್ದು, ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ.

ಆರೋಗ್ಯ ಮಾಹಿತಿ ಹಂಚಿಕೊಂಡ ಸುಪ್ರಿಯಾ ಸುಳೆ

ಶರದ್ ಪವಾರ್‌ ಅವರ ಪುತ್ರಿ ಹಾಗೂ ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಪವಾರ್‌ ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿವೆ ಎಂದು ತಿಳಿಸಿದ್ದಾರೆ.

Must Read

Skip to toolbar