November 2, 2026
Monday, November 2, 2026
spot_img

ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ ಅಂಕೋಲಾ:

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಯುವಕನನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.

ಹಳವಳ್ಳಿ ನಿವಾಸಿ ಸಂತೋಷ ಕೃಷ್ಣ ಸಿದ್ಧಿ(25) ಬಂಧಿತ ಆರೋಪಿಯಾಗಿದ್ದು ಈತ ರಾಷ್ಟ್ರೀಯ ಹೆದ್ದಾರಿ 66 ರಿಂದ ವೆಂಕಟರಮಣ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಯಾವುದೋ ಮಾದಕ ವಸ್ತು ಸೇವನೆ ಮಾಡಿರುವ ಸ್ಥಿತಿಯಲ್ಲಿ ಇದ್ದರಿಂದ ಮತ್ತು ಬಾಯಿಂದ ಘಾಟು ವಾಸನೆ ಬರುತ್ತಿದ್ದರಿಂದ ಪಿ.ಎಸ್.ಐ ಗುರುನಾಥ ಹಾದಿಮನಿ ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈತನ ವೈದ್ಯಕೀಯ ಪರೀಕ್ಷೆಯನ್ನು ಅಂಕೋಲಾ ತಾಲೂಕು ವೈದ್ಯಾಧಿಕಾರಿಗಳಿಂದ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವುದರಿಂದ ಆರೋಪಿತನ ಮೇಲೆ ದೂರು ದಾಖಲಿಸಲಾಗಿದೆ.

Must Read

Skip to toolbar