November 3, 2026
Tuesday, November 3, 2026
spot_img

ಧರ್ಮಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಆರಂಭ: ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಡಿಕೆಶಿ

ಹೊಸದಿಗಂತ ವರದಿ ಚಿತ್ರದುರ್ಗ:

ಸಿಎಂ ಡಿ ಕೆ ಶಿವಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಧರ್ಮಪುರದಲ್ಲಿ ನೂತನ ಕೆಎಸ್‌ಆರ್‌ಟಿಸಿ ನಿಲ್ದಾಣ ಕಾಮಗಾರಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.

ಸಚಿವರಾದ ಟಿ ರಘುಮೂರ್ತಿ, ಕೆ ಎಸ್ ಬಸವಂತಪ್ಪ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಜಮೀರ್ ಅಹಮದ್ ಖಾನ್, ಡಾ. ಅಜಯ್ ಧರ್ಮಸಿಂಗ್, ಹೆಚ್.ಸಿ. ಬಾಲಕೃಷ್ಣ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ಬಿ ಜಿ ಗೋವಿಂದಪ್ಪ, ವೀರೇಂದ್ರ ಪಪ್ಪಿ, ಡಾ. ಕುಣಿಗಲ್ ರಂಗನಾಥ್, ವಿಧಾನಪರಿಷತ್ ಸದಸ್ಯ ಡಿ ಟಿ ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ದ್ರಾಕ್ಷಿ ಮಂಡಳಿ ಅಧ್ಯಕ್ಷ ಜಿ ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ ಎಸ್ ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್ ಟಿ ಮಂಜಪ್ಪ, ಭೋವಿ ನಿಗಮದ ಅಧ್ಯಕ್ಷ ರಾಮಪ್ಪ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಮಾಜಿ ಸಂಸದ ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ಎಚ್ ಆಂಜನೇಯ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡ ಸುಹಾಸ್ ಸುಧಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Must Read

Skip to toolbar