November 5, 2026
Thursday, November 5, 2026
spot_img

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಡಿಯೋ ವೈರಲ್ ಮಾಡಿದ್ದು ನಟ ಧನ್ವೀರ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಡಿಯೋವೊಂದು ಭಾರೀ ವೈರಲ್‌ ಆಗಿತ್ತು. ಈ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ವಿಡಿಯೋ ವೈರಲ್‌ ಮಾಡುವುದಕ್ಕೆ ಧನ್ವೀರ್‌ ಅವರ ಫೋನ್‌ ಬಳಕೆಯಾಗಿದೆ ಎನ್ನುವುದಕ್ಕೆ ಸಾಕ್ಷಿಗಳು ಲಭ್ಯವಾಗಿದೆ. ಈ ಸಂಬಂಧ ಸಿಸಿಬಿ ಪೊಲೀಸರಿಗೆ ಮೊಬೈಲ್ ರಿಟ್ರೀವ್ ವರದಿ ಕೈ ಸೇರಿದೆ.

ವಿಡಿಯೋ ವೈರಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಧನ್ವೀರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಯಾವುದೇ ವಿಡಿಯೋಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ, ಅಳಿಸಲಾದ ಡೇಟಾವನ್ನು ಮರುಪಡೆಯಲು ಪೊಲೀಸರು ಮುಂದಾಗಿದ್ದರು.

ಮೊಬೈಲ್‌ ರಿಟ್ರೀವ್‌ ವರದಿ ಸಿಸಿಬಿ ಪೊಲೀಸರ ಕೈ ಸೇರಿದ್ದು, ಅವರ ಫೋನ್‌ನಿಂದಲೇ ವಿಡಿಯೋ ವೈರಲ್‌ ಆಗಿದೆ ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ, ಬಂಧನ ವಾರಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

Must Read