ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ನಿರ್ಮಾಣವಾಗಿರುವ ರಾಮಾಯಣ ಸಿನಿಮಾ ತೆರೆ ಮೇಲೆ ಅಪ್ಪಳಿಸಿದೆ. ಭಾರತದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಥೆಯಾಗಿರುವ ರಾಮಾಯಣ ಇದೀಗ ವಿಶ್ವದ ಮೂಲೆ ಮೂಲೆಗಳನ್ನು ಮುಟ್ಟಲಿದೆ. ಇಂದು ಸಿನಿಮಾ ರಿಲೀಸ್ ಆಗಿದ್ದು, ನೂರು ಕೋಟಿ ಸಂಭಾವನೆ ಬಾಚಿಕೊಳ್ಳುವ ನಿರೀಕ್ಷೆ ಇದೆ.
ಸಿನಿಮಾ ಜನರಿಗೆ ಇಷ್ಟವಾಗಿ ಹೆಚ್ಚು ಮಂದಿ ಥಿಯೇಟರ್ಗಳಿಗೆ ಲಗ್ಗೆ ಇಟ್ಟರೆ ಸಾವಿರದಿಂದ ಮೂರು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುವ ಎಲ್ಲ ಸಾಧ್ಯತೆಗಳಿವೆ. ದೊಡ್ಡ ಬಜೆಟ್ನಲ್ಲಿ ನಟ ಯಶ್ ಟಾಕ್ಸಿಕ್ ಸಿನಿಮಾ ಬಿಡುಗಡೆ ಮಾಡಿದ್ದರು. ಆದರೆ ಸಿನಿಮಾ ಅಂದುಕೊಂಡ ಮಟ್ಟಿಗೆ ಯಶಸ್ಸು ಕಾಣಲಿಲ್ಲ. ಇದೀಗ ಟಾಕ್ಸಿಕ್ ರಾಯನನ್ನು ಜನ ಮರೆತು ರಾಮಾಯಣದ ರಾವಣನನ್ನು ನೋಡಲು ಥಿಯೇಟರ್ಗೆ ಹೋಗಬೇಕಿದೆ.
ರಾಮನ ಪಾತ್ರದಲ್ಲಿ ನಟ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಗಾಂಭೀರ್ಯತೆಯಿಂದ ಮಾಡುವ ಪಾತ್ರ ಇದಾಗಿದ್ದು, ರಣ್ಬೀರ್ ಈ ಪಾತ್ರವನ್ನು ಹೇಗೆ ನಿಭಾಯಿಸಿದ್ದಾರೆ ಎನ್ನುವ ಕುತೂಹಲ ಜನರಲ್ಲಿದೆ. ಇನ್ನು ಸೀತಾಮಾತೆಯ ಪಾತ್ರದಲ್ಲಿ ನಟಿ ಸಾಯಿ ಪಲ್ಲವಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಸನ್ನಿ ಡಿಯೋಲ್, ರವಿ ದುಬೆ, ಅರುಣ್ ಗೋವಿಲ್, ಲಾರಾ ದತ್ತಾ, ಇಂದಿರಾ ಕೃಷ್ಣನ್, ಸೋನಲ್ ಝಾ, ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಅನುಪಮ್ ಖೇರ್, ವಿಕ್ರಾಂತ್ ಮೆಸ್ಸಿ, ವಿವೇಕ್ ಒಬೆರಾಯ್ ಕಾಣಿಸಿಕೊಂಡಿದ್ದಾರೆ.
ಸಿನೆಪೊಲಿಸ್ ಇಂಡಿಯಾದ ವಾಣಿಜ್ಯ ವಿಭಾಗದ ಮುಖ್ಯಸ್ಥ ಆಶಿಶ್ ಮಿಶ್ರಾ ಮಾಹಿತಿ ನೀಡಿರುವಂತೆ, ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಟಿಕೆಟ್ಗಳು ಮುಂಗಡವಾಗಿ ಮಾರಾಟವಾಗಿವೆ. ಮೊದಲ ದಿನವೇ 1,600ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜಿಸಲು ಯೋಜಿಸಲಾಗಿದೆ. ದೆಹಲಿ, ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಿನಿಮಾಗೆ ಉತ್ತಮ ಬೇಡಿಕೆ ಕಂಡುಬಂದಿದೆ. ಎರಡನೇ ಹಂತದ ನಗರಗಳಲ್ಲಿಯೂ ನಿರೀಕ್ಷೆಗಿಂತ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.



