Friday, September 19, 2025

ಬೆಂಗಳೂರಿಗೆ ಬ್ರೇಕ್‌ ನೀಡದ ಜಡಿಮಳೆ: ರಸ್ತೆಗಳೆಲ್ಲ ಜಲಾವೃತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಲಿಕಾನ್ ಸಿಟಿ ಮಳೆಯಿಂದ ತೊಯ್ತು ತೊಪ್ಪೆಯಾಗಿದೆ. ಸಂಜೆ ಮಳೆ ಆರಂಭವಾದರೆ ಮರುದಿನದ ಬೆಳಗ್ಗೆವರೆಗೂ ಸುರಿಯುತ್ತಿದೆ. ಇದರಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಗುರುವಾರ ಸಂಜೆಯಿಂದ ಶುರುವಾದ ಮಳೆ ಜಿಟಿಜಿಟಿ ಸುರಿಯುತ್ತಿದೆ.

ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್ ಮಾರ್ಕೆಟ್, ಯಲಹಂಕ, ಓಕಳಿಪುರ, ಸರ್ಜಾಪುರ, ಹೆಬ್ಬಾಳ ಸೇರಿದಂತೆ ಹಲವು ಕಡೆ ಮಳೆಯಿಂದ ತೊಂದರೆಯಾಗಿದೆ. ಹಲವು ಕಡೆ ಮರಗಳು ಧರೆಗುರುಳಿವೆ. ಚಾಮರಾಜಪೇಟೆಯ ಸಂಗಮ ಸರ್ಕಲ್ ಬಳಿ ಮರ ಧರೆಗುರುಳಿದೆ. ಹೊಸೂರು ರಸ್ತೆ, ಮೈಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ, ಓಕಳಿಪುರ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಕೆ.ಆರ್. ಸರ್ಕಲ್, ಬನ್ನೇರುಘಟ್ಟ ರಸ್ತೆ, ಕಸ್ತೂರಿ ನಗರ, ಹೆಬ್ಬಾಳ ಜಂಕ್ಷನ್ ಸೇರಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಪರಿಣಾಮ ವಾಹನ ಸವಾರರು ಸಂಚಾರಕ್ಕೆ ಪರದಾಡಿದರು.

ಇದನ್ನೂ ಓದಿ