November 5, 2026
Thursday, November 5, 2026
spot_img

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ಸದ್ದು: ಪತ್ನಿಯ ಎದುರೇ ಪತಿಯ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ವಿಜಯಪುರ:

ನಗರದ ಮುಂಡರಗಿ ಆಸ್ಪತ್ರೆ ಸಮೀಪ ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದ್ದು, ಯಾಸೀನ್ ಎಂಬವರು ಮೃತಪಟ್ಟಿದ್ದಾರೆ. ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಫ್ಜಲಪುರ ಟಕ್ಕೆ ನಿವಾಸಿ ಯಾಸೀನ್ ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪತಿಯ ಮೇಲೆ ಕಣ್ಣೆದುರೇ ನಡೆದ ಗುಂಡಿನ ದಾಳಿಯಿಂದ ಯಾಸೀನ್ ಅವರ ಪತ್ನಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ:

ಘಟನಾ ಸ್ಥಳದಲ್ಲಿ ಎರಡು ಗುಂಡು ಪತ್ತೆ

ಘಟನಾ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹತ್ಯೆಗೆ ಕಾರಣವೇನು?

ಯಾಸೀನ್ ಅವರ ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಗುರುತು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

Must Read

Skip to toolbar