November 6, 2026
Friday, November 6, 2026
spot_img

ಅನೈತಿಕ ಸಂಬಂಧ: ಪ್ರಿಯಕರನೊಂದಿಗೆ ರೈಲಿಗೆ ಸಿಲುಕಿ ಗೃಹಿಣಿ ಆತ್ಮಹತ್ಯೆ

ಹೊಸದಿಗಂತ ವರದಿ ಮಂಡ್ಯ :

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಗೃಹಿಣಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತಾಲೂಕಿನ ಇಂಡುವಾಳು ಬಳಿಯ ರೈಲುಹಳಿ ಮೇಲೆ ನಡೆದಿದೆ.
ಬೆಂಗಳೂರಿನ ನಿವಾಸಿ ವೀರೇಶ್ ಅವರ ಪತ್ನಿ ಸಹನಾ (27) ಹಾಗೂ ಈಕೆಯ ಪ್ರಿಯಕರ ಸುರೇಶ ಅವರ ಮಗ ರಾಹುಲ್ (27) ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಘಟನೆ ವಿವರ
ಮಂಡ್ಯ ತಾಲೂಕು ಗುನ್ನಾಯ್ಕನಹಳ್ಳಿ ಗ್ರಾಮದವಳೆನ್ನಾದ ಸಹನಾ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಪಾವಗಡದ ಸಮೀಪವಿರುವ ಅರಸೀಕೆರೆ ನಿವಾಸಿ ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೀರೇಶ್‌ನೊಂದಿಗೆ ಪರಿಚಯವಾಗಿ ಪ್ರೀತಿಸಿ ಆತನನ್ನು ಮದುವೆ ಮಾಡಿಕೊಂಡು ಬೆಂಗಳೂರಿನಲ್ಲೇ ವಾಸಿಸುತ್ತಿದ್ದರು.

ಈ ದಂಪತಿಗೆ 5 ವರ್ಷದ ಹೆಣ್ಣು ಹಾಗೂ 2 ವರ್ಷದ ಗಂಡು ಮಗುವಿದೆ. ಈ ಮಧ್ಯೆ ರ್ಯಾಪಿಡ್ ಬೈಕ್ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್‌ನನ್ನು ಸಹನಾ ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇಬ್ಬರ ನಡುವೆ ಅನೈತಿಕ ಸಂಬಂಧ ಬೆಳೆದಿದೆ. ಈ ವಿಚಾರ ಗಂಡ ವೀರೇಶನಿಗೆ ತಿಳಿದು ಪತ್ನಿ ಸಹನಾಳೊಂದಿಗೆ ಜಗಳವಾಡಿದ್ದಾನೆ. ಜೊತೆಗೆ ಬುದ್ದಿ ಹೇಳಿ ನಡತೆ ಬದಲಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾನೆ.

ಆದರೂ ಸಹನಾ ತನ್ನ ಹಳೇ ಚಾಳಿಯನ್ನು ಮುಂದುವರಿದ್ದಾಳೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಇದರಿಂದ ಬೇಸತ್ತ ಸಹನಾ ತನ್ನ ಪ್ರಿಯಕರನೊಂದಿಗೆ ರಾತ್ರಿ ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿದ್ದಾರೆ. ತಾಲೂಕಿನ ಇಂಡುವಾಳು ಬಳಿಯ ಹೆದ್ದಾರಿ ಸರ್ವೀಸ್ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದ ಸಮೀಪ ರಾತ್ರಿ ಸುಮಾರು 1.50ರ ಸಮಯದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ತಲೆಯೊಡ್ಡಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದ ರೈಲ್ವೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶವಗಳನ್ನು ಮಿಮ್ಸ್‌ನ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Must Read