ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದ್ದು, ಅಯೋಧ್ಯೆಯ ದೇಗುಲ ಹೂವುಗಳ ಅಲಂಕಾರದಿಂದ ಕಂಗೊಳಿಸುತ್ತಿದೆ. ಇಂದು ಗಣ್ಯರು ರಾಮಲಲಾಗೆ ವಿಶೇಷ ಆರತಿ ಮಾಡಿ ಪೂಜೆ ನೆರವೇರಿಸಲಿದ್ದಾರೆ.
ದೀಪಾವಳಿಯ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿದ್ದು, ರಾಮಲಲಾನ ದರುಶನಕ್ಕಾಗಿ ಜನ ಬೆಳಗ್ಗೆಯಿಂದಲೇ ಕ್ಯೂನಲ್ಲಿ ನಿಂತು ಕಾಯುತ್ತಿದ್ದಾರೆ. ದೀಪೋತ್ಸವ ಆಚರಣೆಗಳ ಭಾಗವಾಗಿ, ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಶ್ರೀ ರಾಮಲಲಾನಿಗೆ ಜಂಟಿಯಾಗಿ ಆರತಿ ನೆರವೇರಿಸಲಿದ್ದಾರೆ.



