ಹೊಸದಿಗಂತ ವರದಿ ಬೆಳಗಾವಿ:
ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಮಟ್ಕಾ ಜೂಜಾಟಕ್ಕೆ ಕಡಿವಾಣ ಹಾಕಲು ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ 28,840 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಲಕ್ಷ್ಮೀ ಗಲ್ಲಿಯ ಪ್ರಕಾಶ್ ಪೀರಾಜಿ ಹುಲುಕೋತ್ಲೆ (31) ಹಾಗೂ ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯ ರೋಹಿತ್ ಅರ್ಜುನ ಮುರಾರಿ (22) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಕ್ರಮ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ಸಂದರ್ಭದಲ್ಲಿ ಜೂಜಾಟಕ್ಕೆ ಬಳಸುತ್ತಿದ್ದ 28,840 ನಗದು ಹಣವನ್ನು ಜಪ್ತಿ ಮಾಡಲಾಗಿದೆ.
ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅಕ್ರಮ ಮಟ್ಕಾ ಜೂಜಾಟದ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



