March 31, 2026
Tuesday, March 31, 2026
spot_img

ರಾಯರ ಮಠದ ಹುಂಡಿ ಹಣ ಎಣಿಕೆ:27 ದಿನದಲ್ಲಿ 3.5 ಕೋಟಿ ಕಾಣಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 27 ದಿನದಲ್ಲಿ 3.5 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದೆ. ಸಂಗ್ರಹವಾದ ಕಾಣಿಕೆಯಲ್ಲಿ 3,39,12,143 ರೂ. ನೋಟುಗಳು, 11 ಲಕ್ಷ 5,000 ರೂ. ನಾಣ್ಯಗಳಿವೆ. ಇನ್ನೂ 138 ಗ್ರಾಂ ಚಿನ್ನ, 950 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. 

ಮಂತ್ರಾಲಯ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !