November 9, 2026
Monday, November 9, 2026
spot_img

ಜಪಾನ್‌ನಲ್ಲಿ ರಶ್ಮಿಕಾ-ವಿಜಯ್ ದೇವರಕೊಂಡ ದೀಪಾವಳಿ ಸಂಭ್ರಮ: ಕ್ಯೂಟ್ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಪ್ರೀತಿಯ ಹಾಗೂ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ. ಸಿನಿಮಾ ಶೂಟಿಂಗ್‌ಗಳ ಬ್ಯುಸಿ ವೇಳಾಪಟ್ಟಿಯಿಂದ ಕೊಂಚ ಬಿಡುವು ಮಾಡಿಕೊಂಡು, ಈ ಜೋಡಿ ಪ್ರಸ್ತುತ ತಮ್ಮ ಕುಟುಂಬಸ್ಥರೊಂದಿಗೆ ಜಪಾನ್ ದೇಶದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಜಪಾನ್‌ನಲ್ಲಿ ಈ ಅಪರೂಪದ ಕ್ಷಣಗಳನ್ನು ಕಳೆಯುತ್ತಿರುವ ಈ ಜೋಡಿ, ದೀಪಾವಳಿ ಹಬ್ಬವನ್ನು ಅತ್ಯಂತ ವಿಶೇಷವಾಗಿ ಆಚರಿಸಿದ್ದಾರೆ.

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮುದ್ದಾದ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. “ನೀವೆಲ್ಲರೂ ಯಾವಾಗಲೂ ಸಂತೋಷ, ಆರೋಗ್ಯ ಮತ್ತು ಸಮೃದ್ಧಿಯಿಂದ ಇರಲಿ. ನಿಮ್ಮೆಲ್ಲ ಆಸೆಗಳು ಈಡೇರಲಿ, ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು” ಎಂದು ಅಭಿಮಾನಿಗಳಿಗೆ ಹೃತ್ಪೂರ್ವಕವಾಗಿ ಹಾರೈಸಿದ್ದಾರೆ. ಇದರ ಜೊತೆಗೆ ಜಪಾನ್ ಪ್ರವಾಸದ ರಮಣೀಯ ಚಿತ್ರಗಳನ್ನು ಹಾಗೂ ವಿಜಯ್ ದೇವರಕೊಂಡ ಜೊತೆಗಿನ ಪ್ರೇಮಮಯ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇನ್ನೊಂದೆಡೆ ನಟ ವಿಜಯ್ ದೇವರಕೊಂಡ ಕೂಡ ತಮ್ಮ ಕುಟುಂಬದ ಜೊತೆಗಿನ ವಿಶೇಷ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಜಪಾನ್ ದೇಶದಲ್ಲಿದ್ದರೂ ಭಾರತೀಯ ಸಂಸ್ಕೃತಿಯನ್ನು ಮರೆಯದ ವಿಜಯ್, ಅಲ್ಲಿ ಸಾಂಪ್ರದಾಯಿಕ ‘ಗೋಮಾ’ ಆಚರಣೆ ನಡೆಸಿ ಗಮನ ಸೆಳೆದಿದ್ದಾರೆ.

ಒಟ್ಟಿನಲ್ಲಿ ಜಪಾನ್‌ನ ನಿಸರ್ಗ ರಮಣೀಯ ವಾತಾವರಣದಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಕುಟುಂಬಸ್ಥರೊಂದಿಗೆ ಹಬ್ಬ ಆಚರಿಸಿದ ಫೋಟೋಗಳು ಹಾಗೂ ವಿಡಿಯೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

Must Read

Skip to toolbar