November 10, 2026
Tuesday, November 10, 2026
spot_img

WEATHER | ಬದಲಾದ ಹವಾಮಾನ: ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮುಂದುವರಿದ ಒಣಹವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಸದ್ಯ ಒಣಹವೆ ವಾತಾವರಣ ಮುಂದುವರಿಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ಶುಷ್ಕ ಹವಾಮಾನ ಇರಲಿದೆ.

ರಾಜ್ಯಾದ್ಯಂತ ತಗ್ಗಿದ ಮಳೆ

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸಂಪೂರ್ಣ ತಗ್ಗಿದೆ. ಮುಂದಿನ ದಿನಗಳಲ್ಲೂ ಒಣಹವೆ ಮುಂದುವರಿಯಲಿದೆ. ಇನ್ನು, ಬೆಳಗಾವಿ, ಬೀದರ್, ಧಾರವಾಡ, ಬಾಗಲಕೋಟೆ, ಕಲಬುರಗಿ ಹಾಗೂ ವಿಜಯಪುರ ಸೇರಿದಂತೆ ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲದ ಕಾರಣ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಇರುವುದಿಲ್ಲ.

ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಹಾಸನ, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹವಾಮಾನ ಸ್ಥಿರವಾಗಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇಲ್ಲದೆ ಶುಷ್ಕ ಹವೆ ಇರಲಿದೆ.

ನಾಳೆಯ ಮುನ್ಸೂಚನೆ

ನಾಳೆಯೂ ಸಹ ಇಡೀ ರಾಜ್ಯಾದ್ಯಂತ ಇದೇ ರೀತಿಯ ಒಣ ಹವೆ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ವಾತಾವರಣದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳು ಕಂಡುಬರುವ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Must Read

Skip to toolbar