November 10, 2026
Tuesday, November 10, 2026
spot_img

ಬೆಂಗಳೂರಿನಲ್ಲಿ ಪಟಾಕಿ ಹೊಗೆಗೆ ಉಸಿರುಗಟ್ಟಿದ ಜನ: AQI 179ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೀಪಾವಳಿ ಸಂಭ್ರಮದ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಮತ್ತು ಶಬ್ದ ಮಾಲಿನ್ಯದ ಪ್ರಮಾಣ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಗರದ ಗಾಳಿಯ ಗುಣಮಟ್ಟ ಗಣನೀಯವಾಗಿ ಕುಸಿದಿದ್ದು, ಹಲವು ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಹೆಚ್ಚಳ ಕಂಡಿದೆ. ಈ ಬೆಳವಣಿಗೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿರುವ ಬೆನ್ನಲ್ಲೇ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಮಳೆಯಿಲ್ಲದಿದ್ದರಿಂದ ಹೆಚ್ಚಿದ ಮಾಲಿನ್ಯ

ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ಜಡಿಮಳೆಯಾಗಿದ್ದರಿಂದ ಪಟಾಕಿ ಸಿಡಿಸುವ ಪ್ರಮಾಣ ಕಡಿಮೆಯಾಗಿತ್ತು. ಆದರೆ ಈ ಬಾರಿ ಮಳೆಯಿಲ್ಲದ ಕಾರಣ ಜನರು ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದು, ಮಾಲಿನ್ಯ ಹೆಚ್ಚಲು ಪ್ರಮುಖ ಕಾರಣವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 2025ರ ದೀಪಾವಳಿಯಲ್ಲಿ ಬೆಂಗಳೂರಿನ ಗರಿಷ್ಠ AQI 95 ದಾಖಲಾಗಿತ್ತು.

ಇದನ್ನೂ ಓದಿ:

ರಾತ್ರಿ 11ರ ಬಳಿಕ ಸಿಡಿಸಿದರೆ ಕಾನೂನು ಕ್ರಮ

ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ರಾತ್ರಿ 8ರಿಂದ 10ರವರೆಗೆ ಎರಡು ದಿನಗಳ ಕಾಲ ಹಸಿರು ಪಟಾಕಿ ಸಿಡಿಸಲು ಅವಕಾಶವಿತ್ತು. ರಾತ್ರಿ 11ರ ನಂತರ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Must Read

Skip to toolbar