November 11, 2026
Wednesday, November 11, 2026
spot_img

ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ ರೈಲು ಅವಘಡ: ಹಳಿ ತಪ್ಪಿದ 7 ಬೋಗಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಸ್ಸಾಂನಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಯಾಣಿಕ ರೈಲಿನ ಏಳು ಬೋಗಿಗಳು ಹಳಿ ತಪ್ಪಿದ್ದು, ರೈಲ್ವೆ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಕಾಮರೂಪ್ ಮೆಟ್ರೋ ಜಿಲ್ಲೆಯ ದಿಗಾರು ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದ್ದು, ರೈಲ್ವೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದ್ದಾರೆ.

ಆರಂಭಿಕ ಮಾಹಿತಿಯಲ್ಲಿ ಮಿಜೋರಾಂನ ಸೈರಾಂಗ್‌ನಿಂದ ಕೋಲ್ಕತ್ತಾ ಕಡೆಗೆ ತೆರಳುತ್ತಿದ್ದ ಕೋಲ್ಕತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲಿನ ಆರು ಬೋಗಿಗಳು ಹಳಿ ತಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದರು. ಆದರೆ ನಂತರದ ವರದಿಗಳ ಪ್ರಕಾರ, ಹಳಿ ತಪ್ಪಿದ ಬೋಗಿಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:

ರೈಲು ನಿಲ್ದಾಣದ ಸಮೀಪವೇ ಘಟನೆ ನಡೆದಿರುವುದರಿಂದ ರೈಲ್ವೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದ್ದು, ಪರಿಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ ಮುಂದಿನ ಕ್ರಮಗಳ ಮೇಲ್ವಿಚಾರಣೆ ನಡೆಸುತ್ತಿದೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ರೈಲಿನ ಬೋಗಿಗಳು ಹಳಿ ತಪ್ಪಲು ತಾಂತ್ರಿಕ ದೋಷವೇ ಅಥವಾ ಬೇರೆ ಯಾವುದಾದರೂ ಕಾರಣವೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Must Read

Skip to toolbar