ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ ಕ್ರಿಕೆಟ್ ನಿಯಂತ್ರಣ ಮಂಡಳಿ ಪರಿಷ್ಕೃತ ತಂಡವನ್ನು ಪ್ರಕಟ ಮಾಡಿದೆ.
ಮುಂಬರುವ ಪಂದ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ಭಾರತ ಏಕದಿನ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಮೊದಲ ಮೂರು ಪಂದ್ಯಗಳ ತಂಡದಲ್ಲಿದ್ದ ನಾಲ್ವರು ಆಟಗಾರರು ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ನ.19ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯ ಅಭ್ಯಾಸಕ್ಕಾಗಿ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ನಾಯಕ ಶುಭ್ಮನ್ ಗಿಲ್, ಕೆ.ಎಲ್. ರಾಹುಲ್, ಅನ್ಶುಲ್ ಕಂಬೋಜ್ ಹಾಗೂ ಪ್ರಸಿದ್ಧ್ ಕೃಷ್ಣ ಅವರು ಪಂದ್ಯದಿಂದ ಹೊರಗಿದ್ದಾರೆ. ಟೀಮ್ ಇಂಡಿಯಾದಿಂದ ಹೊರಗುಳಿದಿರುವ ನಾಲ್ವರು ಆಟಗಾರರ ಸ್ಥಾನಕ್ಕೆ ಯುವ ಪ್ರತಿಭೆಗಳಿಗೆ ಮಣೆ ಹಾಕಲಾಗಿದೆ. ಅದರಂತೆ ತಿಲಕ್ ವರ್ಮಾ, ವಿಕೆಟ್ ಕೀಪರ್ ಕುಮಾರ್ ಕುಶಾಗ್ರ, ವೇಗಿ ಯಶ್ ಠಾಕೂರ್ ಹಾಗೂ ಆಖಿಬ್ ನಬಿ ಅಂತಿಮ ಎರಡು ಪಂದ್ಯಗಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನಾಯಕ ಶುಭ್ಮನ್ ಗಿಲ್ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದ ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಸಾಥ್ ನೀಡಲು ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.



