November 11, 2026
Wednesday, November 11, 2026
spot_img

ತಾಂತ್ರಿಕ ದೋಷ: ಶಿಗ್ಗಾವಿ ಬಳಿ ಏರ್ ಫೋರ್ಸ್ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್

ಹೊಸದಿಗಂತ ವರದಿ ಹಾವೇರಿ:

ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ವೊಂದು ಶಿಗ್ಗಾವಿ ತಾಲೂಕು ಕಾಮನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ಜಮೀನಿನಲ್ಲಿ ಬುಧವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ.

ಕಾಮನಹಳ್ಳಿ ಗ್ರಾಮದ ಹಾದಿಮನಿ ಅವರ ಜಮೀನಿನಲ್ಲಿ ಬುಧವಾರ ಸಂಜೆ 5.45ರ ಹೊತ್ತಿಗೆ ಭಾರತೀಯ ವಾಯುಪಡೆಯ ZD 4050 ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಇಳಿದಿದೆ. ಹೆಲಿಕಾಪ್ಟರ್ನಲ್ಲಿ ದೀಪಕ್ ಶರ್ಮಾ ಸೇರಿದಂತೆ ವಾಯುಪಡೆಯ ಆರು ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ತಮಿಳುನಾಡಿನ ಸೋಲೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್ ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಜಮೀನಿನಲ್ಲಿ ಇಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಷಯ ತಿಳಿಯುತ್ತಿದ್ದಂತೆ ಶಿಗ್ಗಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

Skip to toolbar