November 12, 2026
Thursday, November 12, 2026
spot_img

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ತಲೆ ಬುರುಡೆ ಪತ್ತೆ

ಹೊಸದಿಗಂತ ವರದಿ ಬೆಳ್ತಂಗಡಿ:

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ತಲೆ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರಂದು ಸಂಜೆ ಬೆಳಕಿಗೆ ಬಂದಿದೆ.

ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿದ್ದಾಗ ಹೆದ್ದಾರಿ ಬದಿಯಲ್ಲಿ ಬುರುಡೆ ಕಂಡುಬಂದಿದೆ. ತಕ್ಷಣ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರರ್ಜಿಯನ್ನು 422/2026 ಸಂಖ್ಯೆಯಡಿ ಸ್ವೀಕರಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದು, ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Must Read

Skip to toolbar