ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಯುರ್ವೇದ ಮತ್ತು ಯೋಗದ ಪ್ರಯೋಜನಗಳನ್ನು ದೇಶದ ಪ್ರತಿಯೊಬ್ಬ ನಾಗರೀಕನೂ ಅರಿಯಬೇಕು. ಇದನ್ನು ತಲುಪಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಬೆಂಗಳೂರಿನ ಜಿಗಣಿ ಬಳಿಯ ಎಸ್-ವ್ಯಾಸ ವಿಶ್ವವಿದ್ಯಾಲಯದ ‘ಪ್ರಶಾಂತಿ ಕುಟೀರ’ದಲ್ಲಿ ನಡೆದ ಸುವರ್ಣ ಮಹೋತ್ಸವ ಹಾಗೂ ಎಚ್.ವಿ. ಶೇಷಾದ್ರಿ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿ, ಸಮಗ್ರ ಆರೋಗ್ಯ ಸೇವೆ ಜಾಗತಿಕ ಮಟ್ಟದಲ್ಲಿ ಹೊಸ ಆಂದೋಲನವಾಗಿ ರೂಪುಗೊಳ್ಳುತ್ತಿದೆ. ಜನರಿಗೆ ಯೋಗ, ಆಯುರ್ವೇದ, ಪ್ರಕೃತಿ ಚಿಕಿತ್ಸೆ ಬಗ್ಗೆ ಆಸಕ್ತಿ ಮೂಡುತ್ತಿದೆ.
ಆಯುಷ್ ಉತ್ಪನ್ನಗಳ ರಫ್ತು ಕೂಡ ಹೆಚ್ಚುತ್ತಿದ್ದು, ಆಯುಷ್ ವಲಯಕ್ಕೆ ಸಂಬಂಧಿಸಿದ ಆರ್ಥಿಕತೆಯು ಹಲವು ಲಕ್ಷ ಕೋಟಿ ರೂಪಾಯಿಗಳ ಮಟ್ಟಕ್ಕೆ ಬೆಳೆದಿದೆ. ಅರಿಶಿನಕ್ಕೆ ಜಾಗತಿಕವಾಗಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ಉತ್ಪಾದನೆ, ಗುಣಮಟ್ಟ ಮತ್ತು ರಫ್ತಿಗೆ ಉತ್ತೇಜನ ನೀಡಲು ಸರ್ಕಾರ ರಾಷ್ಟ್ರೀಯ ಅರಿಶಿನ ಮಂಡಳಿಯನ್ನೂ ಸ್ಥಾಪಿಸಿದೆ ಎಂದು ತಿಳಿಸಿದರು.
ಯಾವುದೇ ವೆಚ್ಚವಿಲ್ಲದೆ ದೊರೆಯುವ ಅತಿದೊಡ್ಡ ಆರೋಗ್ಯ ಕೊಡುಗೆ ಯೋಗವಾಗಿದೆ ಎಂದು ಹೇಳಿದ ಮೋದಿ, ವಿಕಸಿತ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡುವ ದೃಷ್ಟಿಯಿಂದ ಮುಂದಿನ 25 ವರ್ಷಗಳ ಕಾರ್ಯಯೋಜನೆಯನ್ನು ಸಿದ್ಧಪಡಿಸುವಂತೆ ಎಸ್-ವ್ಯಾಸ ವಿಶ್ವವಿದ್ಯಾಲಯಕ್ಕೆ ಕರೆ ನೀಡಿದರು.



