ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.
ಸದ್ದುಗುಂಟೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಆ ಮೂಲಕ ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ಜಾಲವಾಗಿ ನಮ್ಮ ಮೆಟ್ರೋ ಹೊರಹೊಮ್ಮಿದೆ. ನಮ್ಮ ಮೆಟ್ರೋದ ಎರಡನೇ ಹಂತದ ಯೋಜನೆಯ ಭಾಗವಾಗಿರುವ ಪಿಂಕ್ ಲೈನ್, ದಕ್ಷಿಣ ಬೆಂಗಳೂರಿನ ಕಾಳೇನ ಅಗ್ರಹಾರವನ್ನು ಉತ್ತರ ಬೆಂಗಳೂರಿನ ನಾಗವಾರದೊಂದಿಗೆ ಸಂಪರ್ಕಿಸುವ ಉದ್ದೇಶ ಹೊಂದಿದೆ.

21.25 ಕಿ.ಮೀ ಉದ್ದದ ಈ ಮಾರ್ಗದಲ್ಲಿ 7.5 ಕಿ.ಮೀ ಎತ್ತರಿಸಿದ ಮಾರ್ಗ ಹಾಗೂ 13.76 ಕಿ.ಮೀ ಭೂಗತ ಮಾರ್ಗವಿದೆ. ವಿವರವಾದ ಯೋಜನಾ ವರದಿ (ಡಿಪಿಆರ್) ಪ್ರಕಾರ, ಸಂಪೂರ್ಣ ಕಾರ್ಯಾರಂಭಗೊಂಡ ಬಳಿಕ ಈ ಮಾರ್ಗದಲ್ಲಿ ಪ್ರತಿದಿನ ಸುಮಾರು 3.76 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ. ನಾಳೆಯಿಂದಲೇ ಮೆಟ್ರೋದಲ್ಲಿ ಸಾರ್ವಜನಿಕರು ಪ್ರಯಾಣ ಮಾಡಬಹುದಾಗಿದೆ.
ಪಿಂಕ್ಲೈನ್ನ 7.5 ಕಿ.ಮೀ. ನೂತನ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ವೇಳೆ ಪ್ರಧಾನಿ ಜೊತೆಗೆ ರಾಜ್ಯಪಾಲೆ ಡಾ.ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.



