ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 22ರಂದು ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು, ಈ ವಿಚಾರವಾಗಿ ನಿನ್ನೆ ಹಾಗೂ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಯಿತು. ಇದೀಗ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದೂಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮುಂದೂಡುವುದಿಲ್ಲ. ಸಮೀಕ್ಷೆಯ ಬಗ್ಗೆ ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಿದ್ದಾರೆ.ಸಚಿವರು ಕೂಡ ವಿರೋಧಿಸಬೇಕು ಎಂದು ಬಿಜೆಪಿ ಹೇಳುತ್ತಿದೆ ಎಂದು ಆಕ್ರೋಶ ಹೊರಹಾಕಿದರು.