ಏನೇನ್ ಬೇಕು?
ಗೋಧಿ ಹಿಟ್ಟು
ಈರುಳ್ಳಿ
ಹಸಿಮೆಣಸಿನಕಾಯಿ
ಜೀರಿಗೆ
ಕೊತ್ತಂಬರಿ ಸೊಪ್ಪು
ಉಪ್ಪು, ಎಣ್ಣೆ
ಬಿಸಿ ನೀರು
ಮಾಡೋದು ಹೇಗೆ ನೋಡಿಕೊಳ್ಳಿ
ಅಗಲವಾದ ಪಾತ್ರೆಯಲ್ಲಿ ಗೋಧಿ ಹಿಟ್ಟು, ಈರುಳ್ಳಿ, ಹಸಿಮೆಣಸು, ಜೀರಿಗೆ, ಕೊತ್ತಂಬರಿ ಸೊಪ್ಪು ಮತ್ತು ಉಪ್ಪನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಸ್ವಲ್ಪ ಸ್ವಲ್ಪವೇ ಬಿಸಿ ನೀರನ್ನು ಸೇರಿಸುತ್ತಾ, ಚಪಾತಿ ಹಿಟ್ಟಿಗಿಂತ ಸ್ವಲ್ಪ ಮೆತ್ತಗೆ ಹಿಟ್ಟನ್ನು ನುಣ್ಣಗೆ ನಾದಿಕೊಳ್ಳಿ. ಹಿಟ್ಟಿನಿಂದ ಸಣ್ಣ ಉಂಡೆಗಳನ್ನು ಮಾಡಿ, ಒದ್ದೆ ಬಟ್ಟೆ ಅಥವಾ ಪ್ಲಾಸ್ಟಿಕ್ ಹಾಳೆಯ ಮೇಲೆ ಕೈಯಿಂದಲೇ ಒತ್ತಿ ತೆಳುವಾದ ರೊಟ್ಟಿಯಂತೆ ತಟ್ಟಿಕೊಳ್ಳಿ. ಕಾವಲಿ ಬಿಸಿಯಾದ ಮೇಲೆ ರೊಟ್ಟಿಯನ್ನು ಹಾಕಿ, ಎರಡೂ ಕಡೆ ಸ್ವಲ್ಪ ಎಣ್ಣೆ ಅಥವಾ ತುಪ್ಪ ಸವರಿ ಮಧ್ಯಮ ಉರಿಯಲ್ಲಿ ಚೆನ್ನಾಗಿ ಬೇಯಿಸಿ. ಈಗ ಬಿಸಿ ಬಿಸಿಯಾದ ಗೋಧಿ ರೊಟ್ಟಿ ಮೊಸರು, ಉಪ್ಪಿನಕಾಯಿ ಅಥವಾ ಚಟ್ನಿ ಜೊತೆ ಸವಿಯಲು ಸಿದ್ಧ!
ಇದನ್ನ ತಿಂದ್ರೆ ಏನ್ ಲಾಭ?
ಇದರಲ್ಲಿ ಕಾರ್ಬೋಹೈಡ್ರೇಟ್ಸ್ ಸಮೃದ್ಧವಾಗಿದ್ದು, ದೀರ್ಘಕಾಲದವರೆಗೆ ದೇಹಕ್ಕೆ ಬೇಕಾದ ಚೈತನ್ಯವನ್ನು ಒದಗಿಸುತ್ತದೆ.
ನಾರಿನಾಂಶ ಹೆಚ್ಚಿರುವ ಕಾರಣ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಮತ್ತು ಮಲಬದ್ಧತೆ ಸಮಸ್ಯೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಇದು ಬೇಗನೆ ಹೊಟ್ಟೆತುಂಬಿದ ಅನುಭವ ನೀಡುತ್ತದೆ, ಇದರಿಂದ ಅನಗತ್ಯ ತಿಂಡಿಗಳನ್ನು ತಿನ್ನುವುದನ್ನು ತಪ್ಪಿಸಿ ತೂಕ ನಿಯಂತ್ರಣದಲ್ಲಿಡಲು ಸಹಾಯವಾಗುತ್ತದೆ.
ಇದರ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹತೋಟಿಯಲ್ಲಿಡಲು ನೆರವಾಗುತ್ತದೆ.



