November 14, 2026
Saturday, November 14, 2026
spot_img

ಮಡಿಕೇರಿಯಲ್ಲಿ ನಿರ್ಮಾಣ ಹಂತದ ಮನೆ ಮಹಡಿಯಿಂದ ಬಿದ್ದು ಬಾಲಕ ಸಾವು

ಹೊಸದಿಗಂತ ವರದಿ ಮಡಿಕೇರಿ:

ನಿರ್ಮಾಣ ಹಂತದಲ್ಲಿರುವ ಮನೆಯ ಮಹಡಿಯಿಂದ ಜಾರಿ ಬಿದ್ದು ಬಾಲಕನೊಬ್ಬ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ.

ಕುಶಾಲನಗರದ ಗುತ್ತಿಗೆದಾರ ಅರುಣ್ ಎಂಬುವರ ಪುತ್ರ,ಮಡಿಕೇರಿ ನವೋದಯ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿರಂತ್ (11) ಮೃತಪಟ್ಟ ದುರ್ದೈವಿ ಬಾಲಕ. ದೀಪಾವಳಿ ಹಬ್ಬಕ್ಕೆಂದು ರಜೆಯಲ್ಲಿ ಮನೆಗೆ ಬಂದಿದ್ದ ಬಾಲಕ, ನಿರ್ಮಾಣ ಹಂತದಲ್ಲಿರುವ ಮನೆಯ ವೀಕ್ಷಣೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದ.

ಈ ಸಂದರ್ಭ ತಲೆಗೆ ತೀವ್ರ ಏಟು ಉಂಟಾಗಿದ್ದ ಆತನಿಗೆ ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿರುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಶನಿವಾರ ಬಾಲಕನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

Must Read