November 14, 2026
Saturday, November 14, 2026
spot_img

ಮೋದಿ ಸರ್ಕಾರದಿಂದ ಅಭಿವೃದ್ಧಿಗೆ ವೇಗ, ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು?: ಲಿಂಗರಾಜ ಪಾಟೀಲ

ಹೊಸದಿಗಂತ ವರದಿ ಹುಬ್ಬಳ್ಳಿ:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ 15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಹೊಸ ವೇಗ ನೀಡಿದ್ದಾರೆ. ಮೆಟ್ರೋ ರೈಲು, ರೈಲ್ವೆ ಸಂಪರ್ಕ, ಮೂಲಸೌಕರ್ಯ ಹಾಗೂ ಇಂಧನ ಕ್ಷೇತ್ರಗಳಲ್ಲಿ ಕೈಗೊಂಡಿರುವ ಈ ಮಹತ್ವದ ಯೋಜನೆಗಳು ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಭದ್ರ ಬುನಾದಿಯಾಗಲಿವೆ ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಮತ್ತು ಯೋಜನೆಗಳನ್ನು ನೀಡುತ್ತಿದ್ದರೂ, ರಾಜ್ಯದ ಕಾಂಗ್ರೆಸ್ ಸರ್ಕಾರ ಮಾತ್ರ ಕೇಂದ್ರದ ವಿರುದ್ಧ ಆರೋಪ ಮಾಡುವುದನ್ನೇ ತನ್ನ ರಾಜಕೀಯ ಅಜೆಂಡಾ ಮಾಡಿಕೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವ ಬದಲು ರಾಜಕೀಯ ಲಾಭಕ್ಕಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಬೆಂಗಳೂರಿನ ನಮ್ಮ ಮೆಟ್ರೊ ಗುಲಾಬಿ ಮಾರ್ಗದ ವಿಸ್ತರಣೆಯಿಂದ ಕೇವಲ ಬೆಂಗಳೂರಿನ ಅಭಿವೃದ್ಧಿಯಲ್ಲ, ಇಡೀ ಕರ್ನಾಟಕದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಹೆಜ್ಜೆಯಾಗಿದೆ ಎಂದವರು ಹೇಳಿದ್ದಾರೆ.

ಇದನ್ನೂ ಓದಿ:

ರಾಜ್ಯದಲ್ಲಿ ರೈತರು ಕಬ್ಬಿನ ಬೆಲೆಗಾಗಿ ಹೋರಾಟ ಮಾಡುತ್ತಿದ್ದಾರೆ. ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ, ಮೂಲಸೌಕರ್ಯ, ನೀರಾವರಿ ಮತ್ತು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಹೊಸ ಹೊಸ ರಾಜಕೀಯ ವಿವಾದಗಳನ್ನು ಸೃಷ್ಟಿಸುವುದರಲ್ಲೇ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ.

ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಲಾಭವನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಗೂ ತಲುಪಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿಯೂ ರೈಲ್ವೆ, ರಸ್ತೆ, ಕೈಗಾರಿಕೆ, ಕುಡಿಯುವ ನೀರು ಮತ್ತು ನಗರ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಬೇಕು ಎಂದವರು ಒತ್ತಾಯ ಮಾಡಿದ್ದಾರೆ.

Must Read

Skip to toolbar