November 14, 2026
Saturday, November 14, 2026
spot_img

ಅಭಿಮಾನಿಗಳ ಜೊತೆ ಸಿಹಿ ಸುದ್ದಿ ಹಂಚಿಕೊಂಡ ನಟಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಶರ್ಮಿಳಾ ಮಾಂಡ್ರೆ ದಂಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಹಾಗೂ ನಿರ್ಮಾಪಕಿಯಾಗಿ ಗುರುತಿಸಿಕೊಂಡಿರುವ ಶರ್ಮಿಳಾ ಮಾಂಡ್ರೆ ಅಭಿಮಾನಿಗಳೊಂದಿಗೆ ತಮ್ಮ ಜೀವನದ ಅತ್ಯಂತ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಟಿ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ತಾಯಿಯಾಗುವ ಸಂಭ್ರಮದಲ್ಲಿದ್ದಾರೆ. ಈ ಸಿಹಿ ಸುದ್ದಿಯಿಂದ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ನಟಿ ಶರ್ಮಿಳಾ ಮಾಂಡ್ರೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗರ್ಭಿಣಿಯಾಗಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅವರ ಈ ಪೋಸ್ಟ್‌ಗೆ ಅಭಿಮಾನಿಗಳು ಹಾಗೂ ಚಿತ್ರರಂಗದ ಆಪ್ತರು ಕಾಮೆಂಟ್‌ಗಳ ಮೂಲಕ ಶುಭ ಹಾರೈಸುತ್ತಿದ್ದಾರೆ.

ಜುಲೈನಲ್ಲಿ ಮದುವೆ, ಈಗ ತಾಯ್ತನದ ಸಂಭ್ರಮ!

ಶರ್ಮಿಳಾ ಮಾಂಡ್ರೆ ಇದೇ ವರ್ಷದ ಜುಲೈ ತಿಂಗಳಲ್ಲಿ ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರನ್ನು ವಿವಾಹವಾಗಿದ್ದರು. ಮದುವೆಯ ಸಂಭ್ರಮದ ಬಳಿಕ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿ ಅವರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿಯಾಗಿದೆ.

https://www.instagram.com/p/DfuRtrDEn_K/?utm_source=ig_embed&ig_rid=Alb6GBlgLP1SHyPSM7RsBc8

‘ಸಜನಿ’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ

2007ರಲ್ಲಿ ಬಿಡುಗಡೆಯಾದ ‘ಸಜನಿ’ ಚಿತ್ರದ ಮೂಲಕ ಶರ್ಮಿಳಾ ಮಾಂಡ್ರೆ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದರು. ಬಳಿಕ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದರು. ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಚಿತ್ರಗಳಲ್ಲಿಯೂ ಅಭಿನಯಿಸಿ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ನಟನೆಯಷ್ಟೇ ಅಲ್ಲ, ನಿರ್ಮಾಣದಲ್ಲೂ ಸೈ

ಶರ್ಮಿಳಾ ಮಾಂಡ್ರೆ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ತಮಿಳಿನಲ್ಲಿ ಹಲವು ಸಿನಿಮಾಗಳ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಅವರು, ಕನ್ನಡದ ‘ದಸರಾ’ ಚಿತ್ರ ಸೇರಿದಂತೆ ವಿವಿಧ ಸಿನಿಮಾಗಳ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ.

Must Read