November 15, 2026
Sunday, November 15, 2026
spot_img

ಬೆಂಗಳೂರಿಗರೇ ಗಮನಿಸಿ: ಇಂದು ಸಂಜೆ 5 ಗಂಟೆಯವರೆಗೆ ಈ ಏರಿಯಾದಲ್ಲಿ ಪವರ್ ಕಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಗರದ ವಿವಿಧೆಡೆ KPTCL ಮತ್ತು BESCOM ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನ ಹಲವು ಭಾಗಗಳಲ್ಲಿ ದಿನಪೂರ್ತಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗೋಕುಲ MUSS ಉಪಕೇಂದ್ರದಲ್ಲಿ ನಡೆಯುತ್ತಿರುವ ನಿರ್ವಹಣಾ ಕೆಲಸಗಳಿಂದಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು

ಗೋಕುಲ ಎಂಯುಎಸ್‌ಎಸ್, ಡಿ.ಬಿ. ಸಂದ್ರ 2ನೇ ಮತ್ತು 4ನೇ ಬ್ಲಾಕ್, ಜಿ.ಬಿ. ಕಾವಲ್ ಅರಣ್ಯ ಪ್ರದೇಶ, ಗಂಗಮ್ಮ ವೃತ್ತ, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಮತ್ತು ದಕ್ಷಿಣ ಕಾಲೋನಿ, ಬಾಹುಬಲಿ ನಗರ, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗಾರ್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ ಹಾಗೂ ಶಾರದಾಂಬನಗರದಲ್ಲಿ ವಿದ್ಯುತ್ ಇರುವುದಿಲ್ಲ.

ಇದನ್ನೂ ಓದಿ:

ಇದರೊಂದಿಗೆ HMT ಇಂಡಸ್ಟ್ರಿಯಲ್ ಎಸ್ಟೇಟ್, ಪ್ರಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪಾರ್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ. ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟೆನ್ಷನ್, HMR ಲೇಔಟ್, ಎಂಆರ್‌ಟಿಡಿಸಿ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

Must Read

Skip to toolbar