ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಯೋಜನೆ ಸಾಕಾರಗೊಳ್ಳಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನರ ಮುಂದೆ ಒಂದು ನಿಲುವು, ತಮಿಳುನಾಡಿನಲ್ಲಿ ಮತ್ತೊಂದು ನಿಲುವು ತಾಳುತ್ತಿರುವ ದ್ವಿಮುಖ ನೀತಿ ಎಂದು ಟೀಕಿಸಿದರು.
ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಯೋಜನೆ ಜಾರಿಗೆ ತರುವುದಾಗಿ ಹೇಳುತ್ತಿದ್ದಾರೆ. ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರೇ ಯೋಜನೆ ಕಾನೂನುಬಾಹಿರ ಎಂದಿದ್ದಾರೆ. ಹಾಗಾದರೆ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಟೀಕಿಸಿದರು.
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಯೋಜನೆಯ ವಿಚಾರದಲ್ಲಿ ಎಚ್ಚರಿಕೆಯ ನಡೆ ಅನುಸರಿಸುತ್ತಿದೆ. ಅರಣ್ಯ ಪ್ರದೇಶದ ಬಳಕೆ ಮತ್ತು ಪರಿಸರ ಸಂಬಂಧಿತ ಆಕ್ಷೇಪಗಳಿರುವುದರಿಂದ ರಾಜ್ಯ ಸರ್ಕಾರ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಕೇಂದ್ರವನ್ನು ಮನವೊಲಿಸಬೇಕು ಎಂದು ಹೇಳಿದರು.
ಇದೇ ವೇಳೆ ಹಿರಿಯೂರು ಉಪಚುನಾವಣೆ ಟಿಕೆಟ್ ಬಿಜೆಪಿಗೆ ಸಿಗಬೇಕೆಂಬ ನಿರ್ಧಾರ ಪಕ್ಷದಲ್ಲಿದೆ. ಈ ಕುರಿತು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗುವುದು ಎಂದರು.



